ಯಲಬುರ್ಗಾ: ಪಟ್ಟಣದ ಸೋಮವಂಶ ಸಹಸ್ರಾರ್ಜುನ ಮಹಾರಾಜರ ಜಯಂತಿ ಪ್ರಯುಕ್ತ ಶುಕ್ರವಾರ ಪಟ್ಟಣದಲ್ಲಿ ಎಸ್‍ಎಸ್‍ಕೆ ಸಮಾಜದ ವತಿಯಿಂದ ಭಾವಚಿತ್ರದ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಸ್ಥಳೀಯ ಅಂಬಾಭವಾನಿ ದೇವಸ್ಥಾನದಿಂದ ಹೊರಟ ಮೆರವಣಿಗೆಯು ವಿವಿಧ ಬೀದಿಗಳಲ್ಲಿ ಸಂಚರಿಸಿ ವಿಜಯದುರ್ಗಾದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ನಂತರ ಮರಳಿತು. ಮಹಿಳೆಯರು ಕುಂಭ ಮತ್ತು ಆರತಿ ತಟ್ಟೆಗಳೊಂದಿಗೆ ಪಾಲ್ಗೊಂಡಿದ್ದರು.
ಬೇವೂರು ರಸ್ತೆಯ ಬಸವೇಶ್ವರನಗರದಲ್ಲಿರುವ ಸೋಮವಂಶ ಸಹಸ್ರಾರ್ಜುನ ಮಹಾರಾಜರ ವೃತ್ತದ ಬಳಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸಮಾಜದ ಯುವಕ ಮತ್ತು ಯುವತಿ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು. ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಿದ್ದರು. ಮೆರವಣಿಗೆಯ ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮ ಜರುಗಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.