ಯಲಬುರ್ಗಾ: ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸೋಮವಾರ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ ಭೇಟಿ ನೀಡಿ ಪರಿಶೀಲಿಸಿದರು.
ಆಸ್ಪತ್ರೆಯ ವಿವಿಧ ವಿಭಾಗಗಳ ವಾರ್ಡ್‍ಗಳಿಗೆ ಭೇಟಿ ನೀಡಿ ದಾಖಲಾದ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಆಸ್ಪತ್ರೆಯಲ್ಲಿದ್ದ ಒಳ ಮತ್ತು ಹೊರ ರೋಗಿಗಳಿಂದ ವೈದ್ಯಕೀಯ ಸೇವೆ ಕುರಿತು ಮಾಹಿತಿ ಪಡೆದರು.
ಔಷಧಿ ವಿತರಣಾ ವಿಭಾಗದಲ್ಲಿ ಲಭ್ಯವಿರುವ ಔಷಧ ಹಾಗೂ ವಿತರಣಾ ವ್ಯವಸ್ಥೆಯನ್ನು ಪರಿಶೀಲಿಸಿ ಯಾವುದೇ ಕಾರಣಕ್ಕೂ ಅವಧಿ ಮುಗಿದಿರುವ ಮಾತ್ರೆ ಮತ್ತು ಔಷಧವನ್ನು ವಿತರಿಸಬಾರದು. ಹೊರಗಡೆ ಖಾಸಗಿ ಅಂಗಡಿಗಳಲ್ಲಿ ಖರೀದಿಸುವಂತೆ ಸೂಚನೆ ನೀಡಬಾರದು. ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ರೋಗಿಗಳ ಆರೋಗ್ಯ ಕಾಪಾಡುವಲ್ಲಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಸಾರ್ವಜನಿಕರಿಂದ ಯಾವುದೇ ದೂರು ಬರದಂತೆ ನೋಡಿಕೊಳ್ಳಬೇಕು. ಆರ್ಥಿಕವಾಗಿ ಹಿಂದುಳಿದವರು, ರೈತರು, ಮಹಿಳೆಯರು, ಮಕ್ಕಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಅವರಿಗೆ ತ್ವರಿತ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವುದು ಮುಖ್ಯ. ಸರ್ಕಾರದ ಯೋಜನೆಗಳು ಅರ್ಹರಿಗೆ ಸಕಾಲಕ್ಕೆ ತಲುಪಿಸುವ ಕೆಲಸ ಸಂಬಂಧಪಟ್ಟವರು ಮಾಡಬೇಕು ಎಂದು ಹೇಳಿದರು.
ವೈದ್ಯಾಧಿಕಾರಿ ಡಾ.ಕೃಷ್ಣಾ ಸೇರಿ ಇತರೆ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.