ADVERTISEMENT

ಗಂಗಾವತಿ | ನೌಕರರ ವೇತನ ಪಾವತಿ ವಿಳಂಬ: ಮತದಾನ ಬಹಿಷ್ಕಾರ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 5 ಮೇ 2024, 6:14 IST
Last Updated 5 ಮೇ 2024, 6:14 IST
ಸಮಾಜ ಕಲ್ಯಾಣ ಇಲಾಖೆ ಮತ್ತು ಬಿಸಿಎಂ ಇಲಾಖೆ ವಸತಿ ನಿಲಯಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ನೌಕರರ ವೇ ತನ ಪಾವತಿಗೆ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಜಿಲ್ಲಾ ಸಮಿತಿ ಸದಸ್ಯರು ಗಂಗಾವತಿ ಸಮಾಜ ಕಲ್ಯಾಣ ಇಲಾಖೆ ಗ್ರೇಡ್-1ಸಹಾಯಕ ನಿರ್ದೇಶ ಕರಿಗೆ ಮನವಿ ಸಲ್ಲಿಸಿದರು.
ಸಮಾಜ ಕಲ್ಯಾಣ ಇಲಾಖೆ ಮತ್ತು ಬಿಸಿಎಂ ಇಲಾಖೆ ವಸತಿ ನಿಲಯಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ನೌಕರರ ವೇ ತನ ಪಾವತಿಗೆ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಜಿಲ್ಲಾ ಸಮಿತಿ ಸದಸ್ಯರು ಗಂಗಾವತಿ ಸಮಾಜ ಕಲ್ಯಾಣ ಇಲಾಖೆ ಗ್ರೇಡ್-1ಸಹಾಯಕ ನಿರ್ದೇಶ ಕರಿಗೆ ಮನವಿ ಸಲ್ಲಿಸಿದರು.   

ಗಂಗಾವತಿ: ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರ ವಿಳಂಬ ಮಾಡಿದ 8 ತಿಂಗಳ ವೇತನ ಪಾವತಿಸದಿದ್ದರೆ ಮತದಾನ ಬಹಿಷ್ಕರಿಸುವುದಾಗಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಜಿಲ್ಲಾ ಸಮಿತಿ ಸದಸ್ಯರು ಗಂಗಾವತಿ ಸಮಾಜ ಕಲ್ಯಾಣ ಇಲಾಖೆ ಗ್ರೇಡ್-1ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ನೌಕರರ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಗ್ಯಾನೇಶ ಕಡಗದ ಮಾತನಾಡಿ, ಈ ಹಾಸ್ಟೆಲ್‌ಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಕಳೆದ 8 ತಿಂಗಳಿಂದ ಸಮಾಜ ಕಲ್ಯಾಣ ಇಲಾಖೆ ವೇತನ ಪಾವತಿ ಮಾಡಿಲ್ಲ. ಹಾಗೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯಾಲಯ ಮತ್ತು ವಸತಿ ನಿಲಯದಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗೂ ಸಹ 3 ತಿಂಗಳ ವೇತನ ಬಾಕಿಯಿದೆ. ವೇತನ ಪಾವತಿಸುವಂತೆ ಅಧಿಕಾರಿಗಳನ್ನು ಕೇಳಿದರೆ, ಬಜೆಟ್ ಇಲ್ಲ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಬರಗಾಲದ ಪರಿಸ್ಥಿತಿಯಲ್ಲಿ ಹೊರಗುತ್ತಿಗೆ ನೌಕರರ ಕುಟುಂಬ ನಿರ್ವಹಣೆ ಕಷ್ಟವಾಗಿದ್ದು, ಅಧಿಕಾರಿಗಳು 2 ದಿನಗಳ ಒಳಗೆ ವೇತನ ಪಾವತಿಸಬೇಕು. ಇಲ್ಲವಾದಲ್ಲಿ ಮತದಾನ ಬಹಿಷ್ಕರಿಸಿ, ಇಲಾಖೆಗಳ ಎದುರು ಪ್ರತಿಭಟನೆ ಮಾಡಲಾಗುತ್ತದೆ’ ಎಂದರು‌.

ಫಕೀರಪ್ಪ, ದಾವಲಸಾಬ, ಪಾರ್ವತಮ್ಮ, ರಮೇಶ, ಸೋಮನಾಥ, ಭೀಮೇಶ, ರೇಖಮ್ಮ, ವಲಿಸಾಬ, ಭಾಷಾಸಾಬ, ಮಂಜಮ್ಮ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.