ADVERTISEMENT

ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ತಲುಪಿಸಿ: ರೆಡ್ಡಿ ಶ್ರೀನಿವಾಸ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2024, 15:43 IST
Last Updated 26 ಮಾರ್ಚ್ 2024, 15:43 IST
ಕನಕಗಿರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರೆಡ್ಡಿಶ್ರೀನಿವಾಸ ಅವರನ್ನು ಸನ್ಮಾನಿಸಲಾಯಿತು
ಕನಕಗಿರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರೆಡ್ಡಿಶ್ರೀನಿವಾಸ ಅವರನ್ನು ಸನ್ಮಾನಿಸಲಾಯಿತು   

ಕನಕಗಿರಿ: ‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲಿದೆ’ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ತಿಳಿಸಿದರು.

ಇಲ್ಲಿನ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಸಮಿತಿಯ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

‘ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ. ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ಯೋಜನೆ ತಲುಪಿದ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ತಾಂತ್ರಿಕ ಸಮಸ್ಯೆಯಿಂದ ಯೋಜನೆಯ ಸದುಪಯೋಗ ಪಡೆಯದ ಜನರ ಅಗತ್ಯ ದಾಖಲೆಗಳನ್ನು ಪಡೆದುಕೊಂಡು ಯೋಜನೆ ಮುಟ್ಟುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾಧರಸ್ವಾಮಿ ಕಲ್ಲಬಾಗಿಲಮಠ ಮಾತನಾಡಿ,‘ಗ್ಯಾರಂಟಿ ಯೋಜನೆಗಳು ಬಡವರು, ದುರ್ಬಲ ವರ್ಗದ ಜನರಿಗೆ ಆಸರೆಯಾಗಿವೆ’ ಎಂದರು.

ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ನಾಗರಾಜ ಅರಳಿ, ಸದಸ್ಯರಾದ ಸೋಮನಾಥ ದೊಡ್ಡಮನಿ, ಹಜರತ್, ಗ್ರಾಮ ಪಂಚಾಯಿತಿ ಸದಸ್ಯ ಸಾಂಬಮೂರ್ತಿ, ಜಗದೀಶ ಅಂಗಡಿ, ರವಿ ಪಾಟೀಲ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.