ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ ಕೊಚ್ಚಿ ಹೋಗಿರುವ 19ನೇ ಕ್ರಸ್ಟ್‌ಗೇಟ್ ಹೊಸದಾಗಿ ನಿರ್ಮಾಣ ಮಾಡುವ ಕಾರ್ಯ ಆರಂಭವಾಗಿದ್ದು, ಪರ್ಯಾಯವಾಗಿ ಜೆಎಸ್‌ಡಬ್ಲ್ಯು ಕಂಪನಿಗಳ ಗೇಟ್ ತಜ್ಞರು ಮತ್ತು ಎಂಜಿನಿಯರ್‌ಗಳ ಜೊತೆಗೂ ಜನಪ್ರತಿನಿಧಿಗಳು ಚರ್ಚೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ ಅವರು ಭಾನುವಾರ ಮಧ್ಯರಾತ್ರಿ ಜಲಾಶಯಕ್ಕೆ ತೆರಳಿ ಅಧಿಕಾರಿಗಳ ಜೊತೆ ಚರ್ಚಿಸಿ ನೀರು ಪೋಲಾಗುವ ಪ್ರಮಾಣ ಕಡಿಮೆ ಮಾಡಲು ತ್ವರಿತಗತಿಯಲ್ಲಿ ಮಾಡಬೇಕಾದ ಕೆಲಸಗಳ ಬಗ್ಗೆ ಸಮಾಲೋಚಿಸಿದರು.
ಜಲಾಶಯದ ಕ್ರಸ್ಟ್ ಗೇಟ್ ವಿನ್ಯಾಸದ ಬಗ್ಗೆ ಹೈದರಾಬಾದ್‌ನ ಕನ್ನಯ್ಯ ನಾಯ್ಡು ಅವರಿಂದ ಮಾಹಿತಿ ಪಡೆದಿದ್ದಾರೆ. ಹೊಸಪೇಟೆಯ ಹಿಂದೂಸ್ತಾನ್ ಎಂಜಿನಿಯರಿಂಗ್ ಮತ್ತು ನಾರಾಯಣ ಎಂಜಿನಿಯರಿಂಗ್ ಕಂಪನಿಗಳು ಈಗಾಗಲೇ ಗೇಟ್ ಸಿದ್ದಪಡಿಸುವ ಕಾರ್ಯ ಆರಂಭಿಸಿದ್ದಾರೆ. ತ್ವರಿತವಾಗಿ ಗೇಟ್ ಅಳವಡಿಸಲು ಜೆಎಸ್‌ಡಬ್ಲ್ಯು ಎಂಜಿನಿಯರ್‌ಗಳ ಮೊರೆಯೂ ಹೋಗಿದ್ದಾರೆ.
ಜಿಲ್ಲಾಧಿಕಾರಿ ನಲಿನ್ ಅತುಲ್, ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗುಲಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.