ADVERTISEMENT

ಶಾಲೆಯಲ್ಲಿ ಮೊಟ್ಟೆ ವಿತರಣೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2024, 15:54 IST
Last Updated 28 ಸೆಪ್ಟೆಂಬರ್ 2024, 15:54 IST
ಕೊಪ್ಪಳದ ಸಿ.ಪಿ.ಎಸ್.ಶಾಲೆಯಲ್ಲಿ ಅಜೀಂ ಪ್ರೇಮ್‍ಜಿ ಫೌಂಡೇಷನ್ ವತಿಯಿಂದ ವಾರದಲ್ಲಿ ನಾಲ್ಕು ದಿನ ಮೊಟ್ಟೆ ನೀಡುವ ಕಾರ್ಯಕ್ಕೆ ಸಂಸದ ಕೆ. ರಾಜಶೇಖರ ಹಿಟ್ನಾಳ ಚಾಲನೆ ನೀಡಿದರು
ಕೊಪ್ಪಳದ ಸಿ.ಪಿ.ಎಸ್.ಶಾಲೆಯಲ್ಲಿ ಅಜೀಂ ಪ್ರೇಮ್‍ಜಿ ಫೌಂಡೇಷನ್ ವತಿಯಿಂದ ವಾರದಲ್ಲಿ ನಾಲ್ಕು ದಿನ ಮೊಟ್ಟೆ ನೀಡುವ ಕಾರ್ಯಕ್ಕೆ ಸಂಸದ ಕೆ. ರಾಜಶೇಖರ ಹಿಟ್ನಾಳ ಚಾಲನೆ ನೀಡಿದರು   

ಕೊಪ್ಪಳ: ‘ಅಜೀಂ ಪ್ರೇಮ್‍ಜಿ ಫೌಂಡೇಷನ್‌ ಮಾಡುತ್ತಿರುವ ಸೇವಾ ಕಾರ್ಯ ಪ್ರಪಂಚಕ್ಕೆ ಮಾದರಿಯಾಗಿದೆ’ ಎಂದು ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದರು.

ಅವರು ನಗರದ ಸಿ.ಪಿ.ಎಸ್. ಶಾಲೆಯಲ್ಲಿ ಫೌಂಡೇಷನ್ ವತಿಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ 4 ದಿನಗಳ ಮೊಟ್ಟೆ ವಿತರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ಸರ್ಕಾರ ಶಾಲಾ ಮಕ್ಕಳಲ್ಲಿ ಅಪೌಷ್ಠಿಕತೆ ಹೋಗಲಾಡಿಸಲು ಕ್ಷೀರಭಾಗ್ಯ, ಮಧ್ಯಾಹ್ನದ ಬಿಸಿಯೂಟ ಹಾಗೂ ಮೊಟ್ಟೆ ನೀಡುವ ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರಕ್ಕೆ ಕೈ ಜೋಡಿಸುವ ನಿಟ್ಟಿನಲ್ಲಿ ಅಜೀಂ ಪ್ರೇಮ್‍ಜಿ ಫೌಂಡೇಷನ್‌ ವಾರದಲ್ಲಿ ನಾಲ್ಕು ದಿನ ಮೊಟ್ಟೆ ನೀಡಲು ₹1500 ಕೋಟಿ ನೀಡಿರುವುದು ಶ್ಲಾಘನೀಯ’ ಎಂದರು.

ಶಿಕ್ಷಕ ಬೀರಪ್ಪ ಅಂಡಗಿ, ನಗರಸಭೆ ಅಧ್ಯಕ್ಷ ಅಮ್ಜದ್‌ ಪಟೇಲ್‌, ಸದಸ್ಯ ಅಜೀಮ ಅತ್ತಾರ, ಅಕ್ಷರ ದಾಸೋಹದ ಜಿಲ್ಲಾ ಅಧಿಕಾರಿ ಅನಿತಾ, ತಾಲ್ಲೂಕು ಅಧಿಕಾರಿ ಮಲ್ಲಿಕಾರ್ಜುನ ಗುಡಿ, ನಿಕಟ ಪೂರ್ವ ಅಧಿಕಾರಿ ಹನುಮಂತಪ್ಪ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿರೂಪಾಕ್ಷಪ್ಪ ಬಾಗೋಡಿ, ಕಾಶಿನಾಥ ಸಿರಿಗೇರಿ, ಶಿಕ್ಷಕ ಮಲ್ಲಿಕಾರ್ಜುನ ಹ್ಯಾಟಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.