ಅಳವಂಡಿ: ಅಳವಂಡಿ ಗ್ರಾಮದಲ್ಲಿ ಶುಕ್ರವಾರ ನಾಯಿಯೊಂದು ಕಚ್ಚಿ ಎಂಟು ಜನ ಗಾಯಗೊಂಡಿದ್ದಾರೆ.
ಗ್ರಾಮದಲ್ಲಿ ನಾಯಿ ಕಡಿತದಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಮಕ್ಕಳು, ವೃದ್ಧರು, ಮಹಿಳೆ ಸೇರಿದಂತೆ ಯುವಕರಿಗೆ ನಾಯಿ ಕಡಿದಿದ್ದು, ಗಾಯಾಳುಗಳಿಗೆ ದೇಹದ ವಿವಿಧ ಭಾಗಗಳಲ್ಲಿ ಗಾಯಗಳಾಗಿವೆ.
ಗಾಯಾಳುಗಳಿಗೆ ಅಳವಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ತದನಂತರ 7 ಜನರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ಮಕ್ಕಳನ್ನು ಹೊರಗಡೆ ಕಳುಹಿಸಬೇಡಿ ಹಾಗೂ ಹೊರಗೆ ಬಂದವರು ಎಚ್ಚರದಿಂದ ಇರಬೇಕು ಎಂದು ಸಾರ್ವಜನಿಕರಿಗೆ ಗ್ರಾಮ ಪಂಚಾಯಿತಿ ಮನವಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.