ADVERTISEMENT

‘ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿ’

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 5:26 IST
Last Updated 26 ಜೂನ್ 2024, 5:26 IST
ಮೈನಹಳ್ಳಿ ಗ್ರಾಮದಲ್ಲಿ ನಡೆದ ದಾಖಲಾತಿ ಮತ್ತು ಹಾಜರಾತಿ ಆಂದೋಲನ ಕಾರ್ಯಕ್ರಮದಲ್ಲಿ ಮಕ್ಕಳು ಕುಂಭ ಕಶಸದೊಂದಿಗೆ ಪಾಲ್ಗೊಂಡಿದ್ದರು
ಮೈನಹಳ್ಳಿ ಗ್ರಾಮದಲ್ಲಿ ನಡೆದ ದಾಖಲಾತಿ ಮತ್ತು ಹಾಜರಾತಿ ಆಂದೋಲನ ಕಾರ್ಯಕ್ರಮದಲ್ಲಿ ಮಕ್ಕಳು ಕುಂಭ ಕಶಸದೊಂದಿಗೆ ಪಾಲ್ಗೊಂಡಿದ್ದರು   

ಅಳವಂಡಿ: ಸರ್ಕಾರಿ ಶಾಲೆಗಳು ಪ್ರಗತಿ ಹೊಂದಲು ಗ್ರಾಮಸ್ಥರ ಸಹಕಾರ ಅತ್ಯವಶ್ಯಕವಾಗಿದೆ. ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ದಾಖಲಿಸಿ, ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಶಾಲೆಯ‌ ಮುಖ್ಯಶಿಕ್ಷಕ ಶಂಭುಲಿಂಗನಗೌಡ ಪಾಟೀಲ ಹೇಳಿದರು.

ಸಮೀಪದ ಮೈನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಲಿಕಾ ಟಾಟಾ ಟ್ರಸ್ಟ್ ಕೊಪ್ಪಳ ವತಿಯಿಂದ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲಾ ಮಕ್ಕಳ ದಾಖಲಾತಿ ಮತ್ತು ಹಾಜರಾತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಆಕರ್ಷಕ ಡೊಳ್ಳು ಕುಣಿತ, ಕೋಲಾಟ ನೃತ್ಯ, ಪೂರ್ಣ ಕುಂಭಕಶಸದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಿಕ್ಷಣದ ಮಹತ್ವ ಸಾರುವ ಘೋಷಣೆ ಕೂಗಲಾಯಿತು. ಎತ್ತಿನ ಬಂಡಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಮಕ್ಕಳು ವಿವಿಧ ವೇಷಭೂಷಣಗಳನ್ನು ಧರಿಸಿದ್ದು ಗಮನ ಸೆಳೆಯಿತು.

ADVERTISEMENT

ಎಸ್‌ಡಿಎಂಸಿ ಅಧ್ಯಕ್ಷ ಮಹೇಂದ್ರಗೌಡ, ಉಪಾಧ್ಯಕ್ಷ ನಾಗಭೂಷಣ ಬೇಳೂರು, ಕಲಿಕಾ ಟ್ರಸ್ಟ್‌ ಸಂಯೋಜಕ ಕಲ್ಲಪ್ಪ, ಸುರೇಶ ಇದ್ದರು.

ಶಾಲಾ ಮಕ್ಕಳಿಂದ ಡೊಳ್ಳು ಕುಣಿತ ಆಕರ್ಷಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.