ಕನಕಗಿರಿ: ಶಾಲೆಯ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲಾಗುವುದು ಎಂದು ಶಾಸಕ ಬಸವರಾಜ ದಢೇಸೂಗೂರು ತಿಳಿಸಿದರು.
ಇಲ್ಲಿನ ಆದರ್ಶ ವಿದ್ಯಾಲಯ (ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ)ದಲ್ಲಿ ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಮಕ್ಕಳ ಶೈಕ್ಷಣಿಕ ಪ್ರಗತಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಶಾಲೆಗೆ ಹೊರಗೋಡೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುವುದು, ಆವರಣದಲ್ಲಿರುವ ವಿದ್ಯುತ್ ಪರಿವರ್ತಕ ಹಾಗೂ ಮೇನ್ ಲೈನ್ ವೈರ್ ತೆರವುಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುವುದು‘ ಎಂದು ಅವರು ತಿಳಿಸಿದರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕನಕರೆಡ್ಡಿ ಕೆರಿ, ಸದಸ್ಯ ಮಂಜುನಾಥ ಗಡಾದ, ಮುಖ್ಯಶಿಕ್ಷಕ ಶಿವಕುಮಾರ ಮಾತನಾಡಿದರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಾದ ಬಸವರಾಜ ಕಂಪ್ಲಿ, ಹನುಮೇಶ ಹಡಪದ, ಪ್ರಕಾಶ ದಾಯಪುಲ್ಲೆ, ಅನ್ನಪೂರ್ಣಮ್ಮ, ಸರಸ್ವತಿ ಇದ್ದರು.
ತನುಶ್ರೀ ಸಂಗಡಿಗರು ಪ್ರಾರ್ಥಿಸಿದರು. ಗುರುಪ್ರಸಾದ ಸ್ವಾಗತಿಸಿದರು. ಕೆ. ಎಲ್.ಮಂಜುನಾಥ ನಿರೂಪಿಸಿದರು. ಸಂತೋಷ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.