ADVERTISEMENT

ಗಂಗಾವತಿ: ಮಮತೆಯ ತೊಟ್ಟಿಲು ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 14:26 IST
Last Updated 3 ಜುಲೈ 2024, 14:26 IST
ಗಂಗಾವತಿ ಬಸ್ ನಿಲ್ದಾಣದಲ್ಲಿ ಬುಧವಾರ ಮಮತೆಯ ತೊಟ್ಟಿಲು ಉದ್ಘಾಟನೆ ಮಾಡಲಾಯಿತು
ಗಂಗಾವತಿ ಬಸ್ ನಿಲ್ದಾಣದಲ್ಲಿ ಬುಧವಾರ ಮಮತೆಯ ತೊಟ್ಟಿಲು ಉದ್ಘಾಟನೆ ಮಾಡಲಾಯಿತು   

ಗಂಗಾವತಿ: ನಗರದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಬುಧವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಮತೆಯ ತೊಟ್ಟಿಲು ಉದ್ಘಾಟನೆ ಮಾಡಲಾಯಿತು.

ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಮಾತನಾಡಿ, ‘ನವಜಾತ ಶಿಶುಗಳನ್ನು ಎಲ್ಲೆಂದರಲ್ಲೆ ಬಿಟ್ಟುಹೋಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಪ್ರಕರಣಗಳ ತಡೆಗೆ ಗಂಗಾವತಿ ನಗರದ ಬಸ್ ನಿಲ್ದಾಣದಲ್ಲಿ ಮಮತೆಯ ತೊಟ್ಟಿಲು ಆರಂಭಿಸಲಾಗಿದೆ.  ಮಕ್ಕಳ ಪೋಷಣೆ ಸಾಧ್ಯವಾಗದಿದ್ದರೆ ಮಮತೆಯ ತೊಟ್ಟಿಲು ಕೇಂದ್ರಕ್ಕೆ ನೀಡಿ’ ಎಂದರು.

‘2015ರಿಂದ ಈವರೆಗೆ ಮಕ್ಕಳ ರಕ್ಷಣಾ ಘಟಕ ಜಿಲ್ಲೆಲ್ಲಿ 74 ಅನಾಥ ಮಕ್ಕಳನ್ನು ರಕ್ಷಿಸಿದ್ದು, ಇದರಲ್ಲಿ 7 ಮಕ್ಕಳು ಆನಾರೋಗ್ಯದಿಂದ ಅಸುನೀಗಿದ್ದಾರೆ‌. ಇನ್ನೂಳಿದ ಮಕ್ಕಳನ್ನು ಪೋಷಣೆ ಮಾಡುತ್ತಿದ್ದು, ಮಗುವಿನ ಅವಶ್ಯಕತೆ ಇದ್ದವರಿಗೆ ನೀಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ADVERTISEMENT

ಹಿರಿಯ ಸಿವಿಲ್ ನ್ಯಾಯಾಧೀಶ ರಮೇಶ ಗಾಣಿಗೇರ, ಪ್ರಧಾ ನ ಸಿವಿಲ್ ನ್ಯಾಯಾಧೀಶೆ ಶ್ರೀದೇವಿ ದರಬಾರೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ನಾಗೇಶ ಪಾಟೀಲ, ಡಿವೈಎಸ್‌ಪಿ ಸಿದ್ದಲಿಂಗಪ್ಪಗೌಡ ಪೊಲೀಸ್ ಪಾಟೀಲ ಮಾತನಾಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರವೀಣಕುಮಾರ ಹೇರೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಗ್ರೇಡ್-2 ತಹಶೀಲ್ದಾರ್ ಮಹಾಂತಗೌಡ ಪಾಟೀಲ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗೌರಿಶಂಕರ, ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ, ಉಪಾಧ್ಯಕ್ಷ ಪರಸಪ್ಪನಾಯಕ, ಕಾರ್ಯದರ್ಶಿ ಮಂಜುನಾಥ ಎ ಚ್.ಎಂ, ವಕೀಲ ಹನುಮೇಶ ಕುಂಬಾರ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.