ಕುಕನೂರು: ‘ಪಂಚಾಯಿತಿಯಲ್ಲಿ ಸಾರ್ವಜನಿಕರನ್ನು ಸತಾಯಿಸದೆ, ಅವರ ಕೆಲಸ ಮಾಡಿಕೊಡಲು ಎಲ್ಲ ವ್ಯವಸ್ಥೆ ಮಾಡಬೇಕು’ ಎಂದು ಸದಸ್ಯರು ಮುಖ್ಯಾಧಿಕಾರಿಗೆ ಒತ್ತಾಯಿಸಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಪಟ್ಟಣ ಪಂಚಾಯಿತಿ ಸಭೆಯಲ್ಲಿ ಮಾತನಾಡಿ, ‘ಶೌಚಾಲಯಗಳ ನಿರ್ವಹಣೆ ಕೊರತೆ, ವಿದ್ಯುತ್ ಕೊರತೆಯಿಂದ ಕುಡಿಯುವ ನೀರಿಗಾಗಿ ಅನೇಕ ತೊಂದರೆ, ಸಿಎ ಸೈಟ್‌ಗಳ ಕ್ರಮಾನುಗತ ಹಂಚಿಕೆ, ಪಟ್ಟಣ ಪಂಚಾಯಿತಿ ಕಟ್ಟಡ ಕಾಮಗಾರಿ ಕಳಪೆಯಾಗಿರುವುದು ಸೇರಿದಂತೆ ಹೀಗೆ ಅನೇಕ ವಿಚಾರಗಳ ಕುರಿತು ಸದಸ್ಯರು ಚರ್ಚಿಸಿದರು.
‘ಸ್ಥಾಯಿ ಸಮಿತಿ ರಚನೆ, ಸರ್ಕಾರಿ ಶಾಲೆಗಳ ಫಾರಂ 3 ನೀಡುವ ಬಗ್ಗೆ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿ ಅನುಮೋದನೆ ತೆಗೆದುಕೊಳ್ಳಲಾಯಿತು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲಲಿತಾ ರಮೇಶ ಯಡಿಯಾಪುರ, ಉಪಾಧ್ಯಕ್ಷ ಪ್ರಶಾಂತ ಆರಬೆರಳಿನ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರವಿ ಬಾಗಲಕೋಟಿ, ರಾಮಣ್ಣ ಬಂಕದಮನಿ, ಗಗನ ನೋಟಗಾರ, ಶಿರಾಜ ಕರ್ಮುಡಿ, ಸಿದ್ದಯ್ಯ ಉಳ್ಳಾಗಡ್ಡಿ, ಬಾಲ್ರಾಜ್ ಗಾಳಿ, ಜಗನ್ನಾಥ ಭೋವಿ, ಚಂದ್ರು, ಮಂಜುನಾಥ ಕೋಳೂರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.