ಕೊಪ್ಪಳ: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ನೀಡಿದ್ದರಿಂದ ಮೊದಲ ದಿನವೇ ಜಿಲ್ಲೆಯ 12 ಜನ ಲಿಂಗತ್ವ ಅಲ್ಪಸಂಖ್ಯಾತರು ‘ಗೃಹಲಕ್ಷ್ಮಿ’ಯರಾದರು.
ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕಚೇರಿಯಲ್ಲಿ ಮಂಗಳವಾರ ಅವರು ಅರ್ಜಿ ಸಲ್ಲಿಸಿದರು. ಜಿಲ್ಲಾಧಿಕಾರಿಯಿಂದ ದೃಢೀಕರಿಸಲ್ಪಟ್ಟ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಿ ಯೋಜನೆ ಪಡೆದುಕೊಳ್ಳಲು ಅರ್ಹತೆ ಗಳಿಸಿಕೊಂಡರು.
‘ಅರ್ಹರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುವ ಗುರುತಿನ ಚೀಟಿ, ಪಾಸ್‌ಪೋರ್ಟ್ ಅಳತೆಯ ಫೋಟೋ ಮತ್ತು ಆಧಾರ್ ಕಾರ್ಡ್ ಸಲ್ಲಿಸಬೇಖು. ಜಿಲ್ಲೆಯ ಎಲ್ಲಾ ಲಿಂಗತ್ವ ಅಲ್ಪಸಂಖ್ಯಾತರು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.