ADVERTISEMENT

ಕೊಪ್ಪಳ | ಅತಿಥಿ ಉಪನ್ಯಾಸಕರ ಧರಣಿ; ಬೆಂಬಲ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2023, 7:48 IST
Last Updated 29 ನವೆಂಬರ್ 2023, 7:48 IST
ಕೊಪ್ಪಳದಲ್ಲಿ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಧರಣಿ ಸ್ಥಳಕ್ಕೆ ಜೆಡಿಎಸ್‌ ರಾಜ್ಯ ಕೋರ್‌ ಕಮಿಟಿ ಸದಸ್ಯ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು
ಕೊಪ್ಪಳದಲ್ಲಿ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಧರಣಿ ಸ್ಥಳಕ್ಕೆ ಜೆಡಿಎಸ್‌ ರಾಜ್ಯ ಕೋರ್‌ ಕಮಿಟಿ ಸದಸ್ಯ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು   

ಕೊಪ್ಪಳ: ಸೇವೆ ಕಾಯಂಗೆ ಆಗ್ರಹಿಸಿ ಹಲವು ದಿನಗಳಿಂದ ನಡೆಸುತ್ತಿರುವ ಅತಿಥಿ‌ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿಗೆ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಧರಣಿ ನಿರತ ಅತಿಥಿ ಉಪನ್ಯಾಸಕರನ್ನು ಸೋಮವಾರ ಭೇಟಿ ಮಾಡಿದ ಜೆಡಿಎಸ್‌ನ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ‘ಅತಿಥಿ ಉಪನ್ಯಾಸಕರ ಬೇಡಿಕೆ ನ್ಯಾಯಯುತವಾಗಿದೆ. ಈ ಹಿಂದೆ ಎಚ್‌.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಗೌರವಧನ ₹5,000 ಹೆಚ್ಚಿಸಿದ್ದರು. ರಾಜಕೀಯದ ಕೆಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅದು ಜಾರಿಯಾಗಲಿಲ್ಲ. ಹಲವು‌ ಗ್ಯಾರಂಟಿ ಜಾರಿಗೊಳಿಸಿರುವ ಈ ಸರಕಾರಕ್ಕೆ ಅತಿಥಿ ಉಪನ್ಯಾಸಕರ ಸೇವಾ ಕಾಯಂ ಹೊರೆಯಲ್ಲ’ ಎಂದರು.

‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತಿಥಿ ಉಪನ್ಯಾಸಕರ ಗೌರವಧನ ದುಪ್ಪಟ್ಟು ಹೆಚ್ಚಿಸಲಾಗಿತ್ತು. ಶಿಕ್ಷಣ ವ್ಯವಸ್ಥೆಯಲ್ಲಿ ಉಪನ್ಯಾಸಕರ ಪಾತ್ರ ಮಹತ್ವದ್ದು. ಅಧಿವೇಶನದಲ್ಲಿ ಈ ಸಮಸ್ಯೆ ಕುರಿತು ಚರ್ಚಿಸಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಜೆಡಿಎಸ್‌ನ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆಯುವೆ’ ಎಂದರು.

ADVERTISEMENT

ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಮಹೇಶ ಗೋವನಕೊಪ್ಪ ಸೇರಿದಂತೆ ಅನೇಕರು ಇದ್ದರು.

ಬೆಂಬಲ: ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಮಂಜುನಾಥ ಗೊಂಡಬಾಳ, ಸಲೀಂ ಅಳವಂಡಿ, ಶ್ರೀನಿವಾಸ ಪಂಡಿತ್ ಹಾಗೂ ಗಂಗಾಧರ ಕಬ್ಬೇರ ಧರಣಿ ನಿರತ ಅತಿಥಿ ಉಪನ್ಯಾಸಕರಿಗೆ ಬೆಂಬಲ ವ್ಯಕ್ತಪಡಿಸಿದರು. ಆಲ್ ಇಂಡಿಯಾ ಡೆಮೊಕ್ರಟಿಕ್ ಯೂತ್ ಆರ್ಗನೈಸೇಷನ್ ರಾಜ್ಯ ಸಮಿತಿ ಬೆಂಬಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.