ಕೊಪ್ಪಳ: ಹನುಮ ಜಯಂತಿ ಅಂಗವಾಗಿ ಜಿಲ್ಲಾಕೇಂದ್ರವೂ ಸೇರಿದಂತೆ ವಿವಿಧೆಡೆ ಮಂಗಳವಾರ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಬೆಳಗಿನ ಜಾವವೇ ದೇವಸ್ಥಾನದಲ್ಲಿ ಹನುಮನ ಹಾಡುಗಳು ಮೊಳಗಿದವು. ನಗರದ ಹಟಗಾರಪೇಟೆ ಆಂಜನೇಯ ದೇವಸ್ಥಾನದಲ್ಲಿ ಅರ್ಚಕ ಶ್ರೀಕಾಂತ ಆಚಾರ್ ನೇತೃತ್ವದಲ್ಲಿ ಆಂಜನೇಯ ಸ್ವಾಮಿ ಮೂರ್ತಿಗೆ ವಿಶೇಷ ಪೂಜೆ ನಡೆಯಿತು. ಸುಪ್ರಭಾತ, ಪಂಚಾಮೃತ ಅಭಿಷೇಕ, ಎಲೆಚೆಟ್ಟು ಸೇವೆ, ತೊಟ್ಟಿಲು ಸೇವೆ ಹಾಗೂ ಮಹಿಳೆಯರಿಂದ ತೊಟ್ಟಿಲು ಆರತಿ ಜರುಗಿತು. ಮಹಾ ಮಂಗಳಾರತಿ, ತೀರ್ಥ ಪ್ರಸಾದ ಜರುಗಿತು.
ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಗವಿಸಿದ್ದಪ್ಪ ಚಿನ್ನೂರ, ನಗರಸಭೆ ಮಾಜಿ ಅಧ್ಯಕ್ಷೆ ಲತಾ ಚಿನ್ನೂರ, ಮಲ್ಲಿಕಾರ್ಜುನ ಸಜ್ಜನ, ಈರಣ್ಣ ಬಂಡಾನವರ, ಬಸವರಾಜ ಮುತ್ತಾಳ, ಗೋಪಾಲಕೃಷ್ಣ ಶೆಟ್ಟರ್, ಪರುಶುರಾಮ ಬುಜಂಗರ, ಪ್ರಾಣೇಶ ಮಹೇಂದ್ರಕರ್, ಅನಿಲ್ ಕುಂಕಮದಾರ, ಶ್ರವಣಕುಮಾರ ಬಂಡಾನವರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.