ಗಂಗಾವತಿ: ದಾಸಶ್ರೇಷ್ಠ ಕನಕದಾಸ ಸಮಾಜದಲ್ಲಿನ ಮೂಢ ನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರು ದ್ದ ಧ್ವನಿ ಎತ್ತಿ, ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕರು ಎಂದು ಮಾಜಿ ಎಂಎಲ್ಸಿ ಎಚ್.ಆರ್ ಶ್ರೀನಾಥ ಹೇಳಿದರು.
ತಾಲ್ಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ಹಾಲುಮತ ಸಮಾಜ ದಿಂದ ಭಾನುವಾರ ನಡೆದ ಕನಕದಾಸ ಜಯಂತಿ ಕಾರ್ಯಕ್ರ ಮದಲ್ಲಿ ಭಾಗವಹಿಸಿ ಮಾತನಾಡಿದರು.
ಕನಕದಾಸರು ಒಂದು ವರ್ಗದ ಸೀಮಿತವಾಗಿಲ್ಲ. ಅವರು ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ಹೋಗಲಾಡಿಸಲು ಶ್ರಮಿಸಿ, ಸಾಹಿತ್ಯಕ್ಕೆ ತನ್ನದೆ ಆದ ಕೊಡುಗೆ ನೀಡಿ, ಎಲ್ಲರನ್ನು ಸಮಾನ ತೆ ದೃಷ್ಡಿಕೋನದಿಂದ ನೋಡುವಂತೆ ತಿಳಿಸಿ ವಿಶ್ವಮಾನವರಾದರು ಎಂದರು.
ನಂತರ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಗ್ರಾಮದ ಪ್ರಮುಖ ರಸ್ತೆಗಳಲ್ಲಿ 108 ಕುಂಭ, ಕಳಸಗಳಿಂದ ಕನಕದಾ ಸರ ಭಾವಚಿತ್ರ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು.
ವಿದ್ಯಾನಿಕೇತನ ಸಂಸ್ಥೆ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು, ಹಾಲುಮತ ಸಮಾಜದ ಯಮನಪ್ಪ ವಿಠಲಾಪೂರ, ಸಣ್ಣಕ್ಕಿ ನೀಲಪ್ಪ ಸೇರಿ ಹಾಲುಮತ ಸಮಾಜದವರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.