ಕೊಪ್ಪಳ: ಪ್ರತಿ ವರ್ಷ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ಇಲ್ಲಿನ ಪ್ರಸಿದ್ಧ ಗವಿಮಠದ ಜಾತ್ರಾ ಮಹೋತ್ಸವ ಜ. 27ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಮೈಸೂರಿನ ಸುತ್ತೂರು ಕ್ಷೇತ್ರದ ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಚಾಲನೆ ನೀಡುವರು.
ಅಂದು ಸಂಜೆ 6 ಗಂಟೆಗೆ ಗವಿಮಠದ ಮುಂಭಾಗದಲ್ಲಿರುವ ಕೈಲಾಸ ಮಂಟಪದಲ್ಲಿ ಜಾತ್ರೆಗೆ ಚಾಲನೆ ಲಭಿಸಲಿದೆ. ಜಮಖಂಡಿಯ ಓಲೇಮಠದ ಅಭಿನವ ಕುಮಾರ ಚನ್ನಬಸವ ಸ್ವಾಮೀಜಿ ಹಾಗೂ ಕೊಪ್ಪಳ ತಾಲ್ಲೂಕಿನ ಹಿರೇಸಿಂಧೋಗಿಯ ಕಪ್ಪತ್ತೇಶ್ವರ ಮಠದ ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಸೋಮವಾರ ತಿಳಿಸಿದ್ದಾರೆ.
ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಘ್, ಚಂದ್ರಯಾನ್–3 ಯೋಜನಾ ನಿರ್ದೇಶಕ ಪಿ. ವೀರಮುತ್ತುವೇಲ್, ಬೆಂಗಳೂರಿನ ಅದಮ್ಯ ಚೇತನ ಫೌಂಡೇಷನ್ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಪಾಲ್ಗೊಳ್ಳುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.