ಅಂಜನಾದ್ರಿ (ಕೊಪ್ಪಳ ಜಿಲ್ಲೆ): ಹನುಮಮಾಲೆ ವಿಸರ್ಜನೆ ಅಂಗವಾಗಿ ಶನಿವಾರ ಮಧ್ಯರಾತ್ರಿಯೇ ಅಂಜನಾದ್ರಿ ಬೆಟ್ಟದಲ್ಲಿರುವ ಹನುಮನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ತರಹೇವಾರಿ ಬಣ್ಣಗಳ ಹೂಗಳಿಂದ ಮೂರ್ತಿಯನ್ನು ಅಲಂಕಾರ ಮಾಡಲಾಗಿತ್ತು. ಶನಿವಾರವೂ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರಿಂದ ಅವರ ಸಂಖ್ಯೆ ಭಾನುವಾರ ಕೂಡ ಹೆಚ್ಚುತ್ತಲೇ ಹೋಯಿತು. ಹೊತ್ತು ಏರುತ್ತಿದ್ದಂತೆಯೇ ಸಾಲುಸಾಲಾಗಿ ಬರುತ್ತಿರುವ ಭಕ್ತರನ್ನು ನಿಯಂತ್ರಿಸಲು ಹಾಗೂ ಸರತಿ ಸಾಲಿನಲ್ಲಿ ಕಳಿಸಲು ಪೊಲೀಸರು ಎರಡು ದಿನಗಳಿಂದ ಸರತಿ ಮೇಲೆ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದಂತೆಯೇ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಅಂಜನಾದ್ರಿಗೆ ಬರುತ್ತಿದ್ದಾರೆ. ಅವರಿಗೆ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಲಾಗಿದೆ. ಹೊರರಾಜ್ಯಗಳ ಭಕ್ತರ ಅನುಕೂಲಕ್ಕೆ ಗಂಗಾವತಿ ರೈಲು ನಿಲ್ದಾಣದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.