ADVERTISEMENT

ಸಾಂಕ್ರಾಮಿಕ ರೋಗ ತಡೆಗೆ ಕ್ರಮ: ಜಿಲ್ಲಾಧಿಕಾರಿ ವಿಕಾಸ್ ಕಿಶೋರ್

ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 31 ಮೇ 2022, 4:11 IST
Last Updated 31 ಮೇ 2022, 4:11 IST
ವಿಕಾಸ್ ಕಿಶೋರ್ ಸುರಳ್ಕರ್
ವಿಕಾಸ್ ಕಿಶೋರ್ ಸುರಳ್ಕರ್   

ಕೊಪ್ಪಳ: ಡೆಂಗಿ ಮತ್ತು ಚಿಕೂನ್‌ಗುನ್ಯಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ (ಎನ್‌ವಿಬಿಡಿಸಿಪಿ) ಅಡಿಯಲ್ಲಿ ಡೆಂಗಿ ಮತ್ತು ಚಿಕೂನ್‌ಗುನ್ಯಾ ನಿಯಂತ್ರಣ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತುತ ಮಳೆಗಾಲ ಪ್ರಾರಂಭ ವಾಗಿದ್ದು, ಸೊಳ್ಳೆಗಳ ಉತ್ಪತ್ತಿ ಹೆಚ್ಚಿರುತ್ತದೆ. ಎಲ್ಲೆಂದರಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಬಹುದು. ತ್ಯಾಜ್ಯ ವಸ್ತುಗಳಾದ ಎಳೆನೀರು ಚಿಪ್ಪುಗಳು, ಅನುಪಯುಕ್ತ ಟೈರ್‌ಗಳು, ಪ್ಲಾಸ್ಟಿಕ್ ಕಪ್ ಇತ್ಯಾದಿ ಘನತ್ಯಾಜ್ಯ ವಸ್ತುಗಳು ಸೂಕ್ತ ರೀತಿಯಲ್ಲಿ ವಿಲೇವಾರಿಯಾಗಬೇಕು. ಈ ನಿಟ್ಟಿನಲ್ಲಿ ಅಂಗಡಿಗಳು, ಗ್ಯಾರೇಜ್, ಹೋಟೆಲ್‌ಗಳಿಗೆ ಅನುಪಯುಕ್ತ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯದಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು ಎಂದು ಎಚ್ಚರಿಕೆ ನೀಡಿದರು.

ADVERTISEMENT

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಲಕನಂದಾ ಮಳಗಿ ಮಾತನಾಡಿ, ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂಗಿ, ಚಿಕೂನ್‌ಗುನ್ಯಾ ಹಾಗೂ ಇತರ ರೋಗಗಳ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಡಿಯುಡಿಸಿಗಂಗಪ್ಪ, ಜಿಲ್ಲಾ ಆಹಾರ ಅಂಖಿತ ಅಧಿಕಾರಿ ಡಾ.ಟಿ.ಲಿಂಗರಾಜು, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ವೆಂಕಟೇಶ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವಿಂದ್ರನಾಥ, ಜಿಲ್ಲಾ ಶಸ್ತ್ರ ಚಿಕಿತ್ಸಕ ಈಶ್ವರ ಸವಡಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಸವರಾಜ ಕುಂಬಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.