ಗಂಗಾವತಿ: ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ 10 ವರ್ಷಗಳ ಹಿಂದೆ ದಲಿತರು ಮತ್ತು ಸವರ್ಣೀಯರ ಮಧ್ಯೆ ನಡೆದ ಜಾತಿ ಸಂಘರ್ಷದ ಕುರಿತ ಜಿಲ್ಲಾ ನ್ಯಾಯಾಲಯದಲ್ಲಿ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಗುರುವಾರ ಪ್ರಕಟವಾಗಿದ್ದು, ಗ್ರಾಮದಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸರ್ಪಗಾವಲು ಹಾಕಿದ್ದರು.
ಗಂಗಾವತಿ ಡಿವೈಎಸ್‌ಪಿ ಸಿದ್ದಲಿಂಗಪ್ಪಗೌಡ ಪೊಲೀಸ್ ಪಾಟೀಲ ಹಾಗೂ ಕನಕಗಿರಿ ಪೊಲೀಸ್ ಠಾಣೆ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಗ್ರಾಮದಲ್ಲಿ ಬೀಡು ಬಿಟ್ಟಿದೆ. ಬಹಳಷ್ಟು ಕಡೆ ಜನರ ಸುಳಿವು ಕಾಣಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.