ADVERTISEMENT

ಲೋಕಸಭೆಗೆ ಎಂಟು ಕ್ಷೇತ್ರಗಳಲ್ಲಿ ಕೆಆರ್‌ಪಿಪಿ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2024, 15:58 IST
Last Updated 4 ಜನವರಿ 2024, 15:58 IST

ಕೊಪ್ಪಳ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ರಾಜ್ಯದ ಎಂಟು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು‌ ಮುಂದಾಗಿದೆ.

‘ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಬೀದರ್, ಬಾಗಲಕೋಟೆ, ಚಿಕ್ಕಬಳ್ಳಾಪುರ ಹಾಗೂ ವಿಜಯಪುರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಮನೋಹರಗೌಡ ಹೇರೂರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು‌.

‘ಫೆಬ್ರುವರಿ 4ರಂದು ಕೊಪ್ಪಳದಲ್ಲಿ ಪಕ್ಷದ ಎಲ್ಲ ತಾಲ್ಲೂಕು ಘಟಕಗಳ ಪ್ರಮುಖರ ಸಮಾವೇಶ ನಡೆಯಲಿದ್ದು, ಅಂದು ಅಭ್ಯರ್ಥಿಗಳನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರೂ‌ ಆದ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಘೋಷಿಸಲಿದ್ದಾರೆ’ ಎಂದು ಹೇಳಿದರು.

ADVERTISEMENT

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಆರ್‌ಪಿಪಿಯಿಂದ 41 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಒಂದು ಕ್ಷೇತ್ರದಲ್ಲಿ ಪಕ್ಷ ಗೆಲುವು ಸಾಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.