ಕನಕಗಿರಿ: ‘ದುಡಿಮೆ ನಂಬಿ ಬದುಕುತ್ತಿರುವ ಹಮಾಲರು ವಸತಿ, ಆರೋಗ್ಯ ಹಾಗೂ ಸಾಮಾಜಿಕ ಭದ್ರತಾ ಸೌಲಭ್ಯದಿಂದ ವಂಚಿತರಾಗಿದ್ದಾರೆ’ ಎಂದು ಹಮಾಲಿ ಫೆಡರೇಷನ್ ರಾಜ್ಯ ಘಟಕದ ಕಾರ್ಯದರ್ಶಿ ನಿರುಪಾದಿ ಬೆಣಕಲ್ ತಿಳಿಸಿದರು.
ತಾಲ್ಲೂಕಿನ ನವಲಿ ಗ್ರಾಮದಲ್ಲಿ ಭಾನುವಾರ ಭೋಗಾಪುರೇಶ್ವರ ಹಮಾಲಿ ಕಾರ್ಮಿಕರ ಸಂಘ ಉದ್ಘಾಟಿಸಿ ಮಾತನಾಡಿದರು.
ಹಮಾಲಿ ಕಾರ್ಮಿಕರು ಅಸಂಘಟಿತರಾಗಿದ್ದಾರೆ. ಅತಿ ಕಠಿಣ ಶ್ರಮದಿಂದ ಬದುಕು ಸಾಗಿಸುತ್ತಿದ್ದಾರೆ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಹೇಳಿದರು.
ಹಮಾಲಿ ಕಾರ್ಮಿಕರಿಗೆ ವರ್ಷದಲ್ಲಿ ಕೆಲ ತಿಂಗಳು ಮಾತ್ರ ಕೆಲಸ ಸಿಗುತ್ತದೆ. ದುಡಿಮೆ ಹಣದಲ್ಲಿ ಕುಟುಂಬ ನಿರ್ವಹಣೆ ಕಷ್ಟ ವಾಗಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಸಾಧ್ಯವಾಗುತ್ತಿಲ್ಲ ಎಂದರು.
ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ಸಿಐಟಿಯು ನೇತೃತ್ವದಲ್ಲಿ ಹತ್ತಾರು ವರ್ಷಗಳಿಂದ ರಾಜ್ಯದ ಹಮಾಲಿ ಕಾರ್ಮಿಕರನ್ನು ಸಂಘಟಿಸಿ ಅವರ ಬದುಕನ್ನು ಹಸನುಗೊಳಿಸುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಿದೆ ಎಂದು ಅವರು
ಹೇಳಿದರು.
ಎಸ್ಎಫ್ಐ ತಾಲ್ಲೂಕು ಘಟಕದ ಕಾರ್ಯದರ್ಶಿ ಶಿವಕುಮಾರ ಈಚನಾಳ, ಕೃಷಿ ಕೂಲಿಕಾರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹುಸೇನಪ್ಪ ಮಾತನಾಡಿದರು.
ಗೌರವ ಅಧ್ಯಕ್ಷ ದುರುಗೇಶ ಮಡಿವಾಳ, ಅಧ್ಯಕ್ಷ ಮುದಿಯಪ್ಪ, ಕಾರ್ಯದರ್ಶಿ ಹೊನ್ನೂರಸಾಬ, ಹಮಾಲಿ ಫೆಡರೇಷನ್ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಪ್ಪ, ಕಾರ್ಯದರ್ಶಿ ಕೃಷ್ಣಪ್ಪ, ನವಿಸಾಬ ಹಾಗೂ ಗಿಡ್ಡಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.