ADVERTISEMENT

ಲೋಕಸಭೆ ಚುನಾವಣೆ | ಸಚಿವ ಮಹದೇವಪ್ಪ ಸ್ಪರ್ಧೆ ಬೇಡ: ಪಾಮಣ್ಣ ಅರಳಿಗನೂರು

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2024, 15:46 IST
Last Updated 6 ಫೆಬ್ರುವರಿ 2024, 15:46 IST
ಪಾಮಣ್ಣ ಅರಳಿಗನೂರು
ಪಾಮಣ್ಣ ಅರಳಿಗನೂರು   

ಕನಕಗಿರಿ: ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್. ಸಿ. ಮಹದೇವಪ್ಪ ಅವರು ಸಮಾಜ ಕಲ್ಯಾಣ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದು, ಪರಿಶಿಷ್ಟ ವರ್ಗದವರ ಕಲ್ಯಾಣಕ್ಕಾಗಿ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಆದರೆ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದು ಬೇಡ. ಪಕ್ಷದ ವರಿಷ್ಠರು ಅವರನ್ನು ರಾಜ್ಯ ರಾಜಕಾರಣದಲ್ಲಿಯೇ ಮುಂದುವರಿಸಬೇಕು ಎಂದು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಪಾಮಣ್ಣ ಅರಳಿಗನೂರು ತಿಳಿಸಿದ್ದಾರೆ

ಈ ಕುರಿತು ಅವರು ಹೇಳಿಕೆ ನೀಡಿದ್ದು, ಬಲಗೈ ಸಮುದಾಯದ ಮಹದೇವಪ್ಪ ಅವರನ್ನು ಕೇಂದ್ರ ರಾಜಕಾರಣಕ್ಕೆ‌ ಕಳಿಸಬಾರದು ಎಂದು ಅವರು ಒತ್ತಾಯಿಸಿದರು.

ಒಂದು ವೇಳೆ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡಿದರೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ದಲಿತ ಮತಗಳು ಛಿದ್ರಗೊಂಡು ಪಕ್ಷ ತುಂಬಾ ನಷ್ಟ ಅನುಭವಿಸುವ ಸಾಧ್ಯತೆಯಿದೆ ಎಂದು ಪ್ರತಿಪಾದಿಸಿದರು.

ADVERTISEMENT

ಮಹದೇವಪ್ಪ ಅವರಿಗೆ ಲೋಕಸಭೆಯ ಟಿಕೆಟ್ ನೀಡಿದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.