ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ವಾಸವಾಗಿರುವ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪುರಸಭೆ ಪರಿಸರ ಎಂಜಿನಿಯರ್ ಶರಣಪ್ಪ ಅವರ ಮನೆ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿ ದಾಳಿ ನಡೆಸಿದ್ದಾರೆ.
ಬೆಳಗಿನ ಜಾವವೇ ಗಂಗಾವತಿಯ ಟೀಚರ್ಸ್ ಕಾಲೊನಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಕೊಪ್ಪಳ ಲೋಕಾಯುಕ್ತ ಡಿವೈಎಸ್ ಪಿ ಸಲೀಂ ಪಾಷಾ ನೇತೃತ್ವದಲ್ಲಿ ದಾಳಿ ನಡೆದಿದೆ.
ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದ್ದು ಶರಣಪ್ಪ ಅವರ ಗಂಗಾವತಿಯ ಮನೆ, ಕಂಪ್ಲಿ ಕಚೇರಿ ಹಾಗೂ ಸಿರಗುಪ್ಪ ತಾಲ್ಲೂಕಿನ ನಡುವಿ ಗ್ರಾಮದ ಸಮೀಪದಲ್ಲಿರುವ ಫಾರ್ಮ್ ಹೌಸ್ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.