ADVERTISEMENT

ಅಂಕಗಳು ಬದುಕು ನಿರ್ಧರಿಸುವುದಿಲ್ಲ: ರಾಮತ್ನಾಳ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2024, 13:41 IST
Last Updated 8 ಫೆಬ್ರುವರಿ 2024, 13:41 IST
ಕೊಪ್ಪಳದ ಎಸ್‌ಎಫ್‌ಎಸ್‌ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು
ಕೊಪ್ಪಳದ ಎಸ್‌ಎಫ್‌ಎಸ್‌ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು   

ಕೊಪ್ಪಳ: ‘ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ತೆಗೆದುಕೊಂಡರೆ ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಶಾಲೆಯಲ್ಲಿ ವಿದ್ಯಾರ್ಥಿಗಳು ಗಳಿಸುವ ಅಂಕಗಳು ಅಂತಿಮವಲ್ಲ. ಅಂಕಗಳು ನಮ್ಮ ಬದುಕನ್ನು ನಿರ್ಧರಿಸುವುದಿಲ್ಲ‘ ಎಂದು ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.

ನಗರದ ಎಸ್‌ಎಫ್‌ಎಸ್‌ ಐಸಿಎಸ್ಇ ಶಾಲೆಯಲ್ಲಿ  ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ನಡೆದ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿ ‘ಮಕ್ಕಳ ಮುಂದಿನ ಗುರಿಯನ್ನು ಪಾಲಕರು ನಿರ್ಧರಿಸಬಾರದು, ಮಕ್ಕಳೇ ತಮ್ಮ ಭವಿಷ್ಯದ ಗುರಿಯನ್ನು ಇಟ್ಟುಕೊಳ್ಳಬೇಕು. ಮುಂದೆ ಗುರಿ ಹಿಂದೆ ಗುರು ಇರಬೇಕು. ಪಾಲಕರು ಮಕ್ಕಳ ಮೇಲೆ ಒತ್ತಡ ಹಾಕಬಾರದು. ಮಗು ಆಸಕ್ತಿಯಿಂದ ಕಲಿತು ಹಂತ ಹಂತವಾಗಿ ವ್ಯಕ್ತಿತ್ವ ರೂಪಿಸಿಕೊಳ್ಳುತ್ತ ಹೋಗಬೇಕು’ ಎಂದರು.

ಶಾಲೆಯ ಪ್ರಾಚಾರ್ಯ ಫಾದರ್‌ ಜಬಮಲೈ, ಸಂಸ್ಥೆಯ ವ್ಯವಸ್ಥಾಪಕದ ಮ್ಯಾಥ್ಯೂ, ಫಾದರ್ ಜೋಜೊ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.