ADVERTISEMENT

ಕಲ್ಯಾಣ ಕರ್ನಾಟಕ ಉತ್ಸವ: ಕೊಪ್ಪಳದಲ್ಲಿ ಸಚಿವ ತಂಗಡಗಿ ರಾಷ್ಟ್ರ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2024, 4:12 IST
Last Updated 17 ಸೆಪ್ಟೆಂಬರ್ 2024, 4:12 IST
<div class="paragraphs"><p>ಕಲ್ಯಾಣ ಕರ್ನಾಟಕ ಉತ್ಸವ: ಕೊಪ್ಪಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮಂಗಳವಾರ ಧ್ವಜಾರೋಹಣ ನೆರವೇರಿಸಿದರು</p></div>

ಕಲ್ಯಾಣ ಕರ್ನಾಟಕ ಉತ್ಸವ: ಕೊಪ್ಪಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮಂಗಳವಾರ ಧ್ವಜಾರೋಹಣ ನೆರವೇರಿಸಿದರು

   

ಕೊಪ್ಪಳ: 77ನೇ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಕೊಪ್ಪಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ  ಧ್ವಜಾರೋಹಣ ನೆರವೇರಿಸಿದರು

ADVERTISEMENT

ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದ ಬಳಿಕ ಪೊಲೀಸ್, ಗೃಹರಕ್ಷಕ ದಳ, ಎನ್ ಸಿಸಿ, ಸೇವಾದಳ, ಸ್ಕೌಟ್ ಅಂಡ್ ಗೈಡ್ಸ್, ಅರಣ್ಯ ಇಲಾಖೆ, ಅಗ್ನಿಶಾಮಕ, ಮಹಿಳಾ ಗೃಹರಕ್ಷಕ ಹಾಗೂ ವಿವಿಧ ಶಾಲಾ ತಂಡಗಳು ಆಕರ್ಷಕ ಪಥ ಸಂಚಲನ ನಡೆಸಿ ಸಚಿವರಿಗೆ ಗೌರವ ಸಲ್ಲಿಸಿದವು.

ಶಿವರಾಜ ತಂಗಡಗಿ ‌ಮಾತನಾಡಿ ನಿಜಾಮರ ಆಡಳಿತದಿಂದ ವಿಮೋಚನೆ ಪಡೆದ ಇತಿಹಾಸ ತಿಳಿಸಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರ ಬದುಕು ಬೆಳಕಾಗಿದೆ. ಇತಿಹಾಸ ಅರಿತವರು ಮಾತ್ರ ಇತಿಹಾಸ ಸೃಷ್ಟಿಸಬಲ್ಲರು ಎನ್ನುವ ಮಾತನ್ನು ಕಲ್ಯಾಣ ಕರ್ನಾಟಕ ಭಾಗದ ಜನ ನಿರೂಪಿಸಿದ್ದಾರೆ. ಸರ್ಕಾರ ಈ ಭಾಗದ ಜನರ ಅಭ್ಯುದಯಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಿದೆ ಎಂದರು.

ಕೊಪ್ಪಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ  ಧ್ವಜಾರೋಹಣ ನೆರವೇರಿಸಿದರು.

ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ‌. ರಾಮ್ ಎಲ್. ಅರಸಿದ್ದಿ, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಉಪ ಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.