ಹನುಮಸಾಗರ: ಸಮೀಪದ ಹಾಬಲಕಟ್ಟಿ ಗ್ರಾಮಕ್ಕೆ ಶಾಸಕ ಅಮರೇಗೌಡ ಬಯ್ಯಾಪುರ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು.
‘ಭೀಮಾಂಬಿಕಾದೇವಿ ಪಾದಗಟ್ಟೆಯಿಂದ ಶರಬಸವೇಶ್ವರ ಪಾದಗಟ್ಟೆಯವರೆಗೆ ಗ್ರಾಮದ ಮುಖ್ಯ ರಸ್ತೆ ಇದೆ. ಅದನ್ನು ಸಿ.ಸಿ ರಸ್ತೆಯನ್ನಾಗಿ ಪರಿವರ್ತಿಸುವ ಅಗತ್ಯ ಇದೆ. ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ ವಿದ್ಯಾರ್ಥಿಗಳು ದೂರದಲ್ಲಿರುವ ಪ್ರೌಢ ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಗ್ರಾಮದಲ್ಲಿರುವ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಯನ್ನಾಗಿ ಮೇಲ್ದರ್ಜೆಗೇರಿಸಬೇಕು’ ಎಂದು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಅಮರೇಗೌಡ ಬಯ್ಯಾಪುರ,‘ಕೂಡಲೇ ಸಿ.ಸಿ ರಸ್ತೆ ನಿರ್ಮಿಸಲಾಗುವುದು. ಪ್ರಾಥಮಿಕ ಶಾಲೆಯನ್ನು ಮೇಲ್ದರ್ಜೆಗೇರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ’ ಎಂದು ಭರವಸೆ ನೀಡಿದರು.
ಗ್ರಾಮದ ಪ್ರಮುಖರಾದ ಮುತ್ತಪ್ಪ ಹವಾಲ್ದಾರ, ಶಂಕರಪ್ಪ ಚಕ್ಕಡಿ, ಶಂಕರ ಗಡಾದ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಮೇಶ ಭೋವಿ, ಬಸವರಾಜ ಪಾಟೀಲ ಹಾಗೂ ಶಿವಶರಣಪ್ಪ ಹೆಬ್ಬುಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.