ADVERTISEMENT

ತಾವರಗೇರಾ: ಶಾಂತಿಯುತ ಮತದಾನ

​ಪ್ರಜಾವಾಣಿ ವಾರ್ತೆ
Published 3 ಜೂನ್ 2024, 15:43 IST
Last Updated 3 ಜೂನ್ 2024, 15:43 IST
ತಾವರಗೇರಾ ಪಟ್ಟಣದಲ್ಲಿ ಸೋಮವಾರ ನಡೆದ ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನಕ್ಕೆ ನಿಂತ ಮತದಾರರು
ತಾವರಗೇರಾ ಪಟ್ಟಣದಲ್ಲಿ ಸೋಮವಾರ ನಡೆದ ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನಕ್ಕೆ ನಿಂತ ಮತದಾರರು   

ತಾವರಗೇರಾ: ಸ್ಥಳಿಯ ಪಟ್ಟಣ ಪಂಚಾಯಿತಿ ಕಚೇರಿಯ ಮತಗಟ್ಟೆಯಲ್ಲಿ ಸೋಮವಾರ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಡೆದ ಮತದಾನ ಶಾಂತಿಯುತವಾಗಿ ಮುಗಿಯಿತು.

ಬೆಳಿಗ್ಗೆಯಿಂದ ಸಂಜೆವರೆಗೆ ಶಾಂತಿಯುತ ಮತದಾನ ನಡೆಯಿತು.  ಕುಷ್ಟಗಿ ತಹಶೀಲ್ದಾರ್‌ ರವಿ ಎಸ್.ಅಂಗಡಿ, ಪಿಎಸ್‌ಐ ಸುಜಾತಾ ನಾಯಕ, ಮತದಾನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಂದಾಯ ನಿರೀಕ್ಷಕ ಶರಣಪ್ಪ ದಾಸರ, ನಾಡ ತಹಶೀಲ್ದಾರ್‌ ಪ್ರಕಾಶ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಭಿಸಾಬ ಖುದನ್ನವರ, ಚುನಾವಣೆ ಸಿಬ್ಬಂದಿ ಹಾಜರಿದ್ದರು. ಮತಗಟ್ಟೆಯಲ್ಲಿ ಪೊಲೀಸರು ಸೂಕ್ತ ಬಂದೋಬಸ್ತ್ ಒದಗಿಸಿದ್ದರು.

ಜನಪ್ರತಿನಿಧಿಗಳ ಭೇಟಿ: ಕುಷ್ಟಗಿ ಕ್ಷೇತ್ರದ ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ ಭೇಟಿ ನೀಡಿ, ಮತಗಟ್ಟೆ ನಿಷೇಧಿತ ಪ್ರದೇಶದ ಹೊರಗೆ ತಮ್ಮ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಜತೆ ಚರ್ಚೆ ನಡೆಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.