ADVERTISEMENT

ಪೇಜಾವರ ಶ್ರೀಗೆ ಬೇಕಾಗಿದ್ದು ಸಂವಿಧಾನವಿಲ್ಲ, ಮನುಸ್ಮೃತಿ: ಅಬ್ಬಯ್ಯ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2024, 12:17 IST
Last Updated 26 ನವೆಂಬರ್ 2024, 12:17 IST
<div class="paragraphs"><p> ಪ್ರಸಾದ ಅಬ್ಬಯ್ಯ</p></div>

ಪ್ರಸಾದ ಅಬ್ಬಯ್ಯ

   

ಕೊಪ್ಪಳ: ‘ನಮ್ಮನ್ನು ಗೌರವಿಸುವ ಸಂವಿಧಾನ ಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳುತ್ತಾರೆ. ಆದರೆ ಅವರಿಗೆ ಈಗಿನ ಸಂವಿಧಾನ ಬೇಕಾಗಿಲ್ಲ, ಬೇಕಾಗಿದ್ದು ಮನುಸ್ಮೃತಿ ಮಾತ್ರ’ ಎಂದು ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆದ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ಛಲವಾದಿ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಪೇಜಾವರ ಶ್ರೀಗಳಿಗೆ ಇತಿಹಾಸವೇ ಗೊತ್ತಿಲ್ಲ. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತ ಹಿಂದೂ ರಾಷ್ಟ್ರವಾಗಿತ್ತು. ಸ್ವಾತಂತ್ರ್ಯ ಬಂದ ಮೇಲೆ ಜಾತ್ಯಾತೀತ ರಾಷ್ಟ್ರವಾಗಿದೆ ಎನ್ನುತ್ತಿದ್ದಾರೆ. ಮೊದಲು ದೇಶದಲ್ಲಿ ಸಂಸ್ಥಾನಗಳಿದ್ದವು ಎನ್ನುವ ಪರಿಕಲ್ಪನೆಯೇ ಅವರಿಗಿಲ್ಲ. ನಮ್ಮದು ಬಹುಸಂಸ್ಕೃತಿ, ಬಹುಭಾಷೆ, ಬಹುಧರ್ಮಗಳ ದೇಶವಾಗಿದೆ’ ಎಂದರು.

ADVERTISEMENT

‘ಸಂವಿಧಾನ ಬದಲಾವಣೆ ಮಾಡಲು ಬಂದಿದ್ದೇವೆ ಎಂದು ಹೇಳುವ ಕೆಲ ಅರೆಹುಚ್ಚರ ಮನಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಮನುವಾದಿಗಳಿಗೆ ಸಂವಿಧಾನ ಬೇಕಾಗಿಲ್ಲ. ಪೇಜಾವರ ಶ್ರೀಗಳಿಗೆ ಮತ್ತೆ ನಮ್ಮನ್ನು ಗುಲಾಮರನ್ನಾಗಿ ನೋಡಬೇಕು ಎನ್ನುವ ಮನಸ್ಥಿತಿಯಿದೆ. ಹಾಗಾಗಿ ನೀವೆಲ್ಲರೂ ಎಚ್ಚೆತ್ತುಕೊಳ್ಳಬೇಕು. ವಿದ್ಯಾವಂತರಾಗಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.