ಕೊಪ್ಪಳ: ಬೆಂಗಳೂರಿನ ಕೆ.ಜಿ. ಹಳ್ಳಿ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಫಯಾಜ್ ಎಂಬುವರನ್ನು ಗುರುವಾರ ಬೆಳಗಿನ ಜಾವ ಪೊಲೀಸರು ಬಂಧಿಸಿದ್ದಾರೆ.
‘ಗಂಗಾವತಿ ನಗರದಲ್ಲಿ ವಾಸವಾಗಿರುವ ಅಬ್ದುಲ್ ಫಯಾಜ್‌ನನ್ನು ಮನೆಗೆ ತೆರಳಿ ಬಂಧಿಸಲಾಗಿದ್ದು, ನಮ್ಮ ತಂಡ ಕೆ.ಜಿ. ಹಳ್ಳಿ ಪೊಲೀಸ್ ಠಾಣೆಗೆ ಆರೋಪಿಯನ್ನು ಕರೆದುಕೊಂಡು ಹೋಗಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಪ್ರಜಾವಾಣಿಗೆ ಖಚಿತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.