ಯಲಬುರ್ಗಾ: ತಾಲ್ಲೂಕಿನ ಬಸಾಪೂರ ಗ್ರಾಮದಲ್ಲಿ ಸಂಗೋಳ್ಳಿ ರಾಯಣ್ಣನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕಾಗಿನೆಲೆಯ ಕನಕಗುರುಪೀಠದ ಸಿದ್ಧರಾಮಾನಂದಪುರಿ ಸ್ವಾಮೀಜಿ ಮಾತನಾಡಿ, ‘ರಾಯಣ್ಣನವರ ವ್ಯಕ್ತಿತ್ವದ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿ ಅವರಂತೆ ನಾವು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡಾಗ ಮಾತ್ರ ರಾಯಣ್ಣನವರಿಗೆ ವಿಶೇಷ ಗೌರವ ಸಲ್ಲಿಸಿದಂತಾಗುತ್ತದೆ. ದೇಶ ಪ್ರೇಮಿಯಾಗಿ ದೇಶಕ್ಕೆ ತಮ್ಮನ್ನು ಸಮರ್ಪಿಸಿಕೊಂಡಿದ್ದ ರಾಯಣ್ಣ ನಿಯತ್ತು ಮತ್ತು ಕ್ರಾಂತಿಕಾರಕ ಧೋರಣೆಗೆ ಹೆಸರಾಗಿದ್ದವರು. ಅವರ ವ್ಯಕ್ತಿತ್ವವು ಪ್ರತಿಯೊಬ್ಬರಿಗೂ ಮಾದರಿಯಾಗಿದೆ’ ಎಂದರು.
ಹಾಲುಮತ ಸಮಾಜದ ಅಧ್ಯಕ್ಷ ವೀರನಗೌಡ ಪೊಲೀಸ್‍ಪಾಟೀಲ ಮಾತನಾಡಿ, ‘ಬ್ರಿಟಿಷರ ಪಾಲಿಗೆ ಸಿಂಹಸ್ವಪ್ನರಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಆದರ್ಶಗಳು ನಮ್ಮಲ್ಲರಿಗೂ ದಾರಿದೀಪಗಳಾಗಿವೆ’ ಎಂದರು.
ಕುದ್ರಿಮೋತಿಯ ಮೈಸೂರುಮಠದ ವಿಜಯಮಹಾಂತ ಸ್ವಾಮೀಜಿ, ಬಾದಿಮಬನಾಳದ ಶಿವಶಿದ್ದೇಶ್ವರ ಸ್ವಾಮೀಜಿ, ಮಳಿಯಪ್ಪಯ್ಯ ಗುರುವಿನ ಕೊರಡಕೇರಾ ಅರಳಯ್ಯ ಹಿರೇಮಠ, ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ ಗುಳಗಣ್ಣವರ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ವಸಂತ ಭಾವಿಮನಿ, ದೊಡ್ಡಯ್ಯ ಗುರುವಿನ, ಕಾಂಗ್ರೆಸ್ ಮುಖಂಡ ಈಶ್ವರ ಅಟಮಾಳಗಿ, ಶರಣಪ್ಪ ಮುಧೋಳ, ಸುಬ್ಬನಗೌಡ ಪೊಲೀಸ್‍ಪಾಟೀಲ, ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಗ್ರಾಮದ ಮುಖಂಡ ಮಹಮ್ಮದ್‍ಸಾಬ ತಾಳಿಕೋಟಿ, ಬಸವರಾಜ್ ಹಾದಿಮನಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.