ಕುಷ್ಟಗಿ: ಸಹಕಾರ ಇಲಾಖೆಯಿಂದ ನೀಡಲಾಗುವ ಪ್ರಸಕ್ತ ವರ್ಷದ ಸಹಕಾರ ರತ್ನ ಪ್ರಶಸ್ತಿಗೆ ಇಲ್ಲಿಯ ಟಿಎಪಿಸಿಎಂಎಸ್ ಉಪಾಧ್ಯಕ್ಷ ಬುಡನ್ಸಾಬ್ ಕಲಾದಗಿ ಆಯ್ಕೆಯಾಗಿದ್ದಾರೆ.
ಬಾಗಲಕೋಟೆಯಲ್ಲಿ ನವೆಂಬರ್17 ರಂದು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುವ ರಾಜ್ಯ ಮಟ್ಟದ 71ನೇ ಸಹಕಾರ ಸಪ್ತಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ತಾಲ್ಲೂಕಿನ ಕಲಾಲಬಂಡಿ ಗ್ರಾಮದವರಾದ ಬುಡನ್ಸಾಬ್ ಅವರು ಅನೇಕ ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಅವಿರತ ಸೇವೆ ಸಲ್ಲಿಸುತ್ತ ಬಂದಿರುವುದಕ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.