ADVERTISEMENT

ಕೊಪ್ಪಳ | ಸಾಲದ ಖಾತೆಗೆ ಪರಿಹಾರದ ಹಣ: ನೋಟಿಸ್‌

​ಪ್ರಜಾವಾಣಿ ವಾರ್ತೆ
Published 24 ಮೇ 2024, 14:01 IST
Last Updated 24 ಮೇ 2024, 14:01 IST

ಕೊಪ್ಪಳ: ಬೆಳೆ ಪರಿಹಾರ ಮೊತ್ತವನ್ನು ಸಾಲದ ಖಾತೆಗೆ ಜಮೆ ಮಾಡಬಾರದು ಎಂದು ಜಿಲ್ಲೆಯ ಎಲ್ಲ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಲಾಗಿದ್ದರೂ ಕುಷ್ಟಗಿಯ ಪಿ.ಕೆ.ಜಿ.ಬಿ ಬ್ಯಾಂಕ್‌ನಲ್ಲಿ ಹಳೆ ಹಾಗೂ ಚಾಲ್ತಿ ಸಾಲಕ್ಕೆ ಸರ್ಕಾರ ನೀಡಿರುವ ಬರಪರಿಹಾರ ಹಣ ಹೊಂದಾಣಿಕೆ ಮಾಡಲಾಗಿದೆ. ಆದ್ದರಿಂದ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ.

ನಿಗದಿತ ಅವಧಿಯೊಳಗೆ ಲಿಖಿತ ಉತ್ತರ ನೀಡದಿದ್ದರೆ ತಪ್ಪಿತಸ್ಥರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಲಿನ್‌ ಅತುಲ್‌ ತಿಳಿಸಿದ್ದಾರೆ.

‘ಜಿಲ್ಲೆಯ ಯಾವುದೇ ಬ್ಯಾಂಕ್‌ನಲ್ಲಿ ಬರಪರಿಹಾರ ಮೊತ್ತವನ್ನು ಸಾಲದ ಖಾತೆಗೆ ಜಮೆ ಮಾಡಿದಲ್ಲಿ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಕಂದಾಯ ಇಲಾಖೆ ಅಥವಾ ಕೃಷಿ ಇಲಾಖೆ ಕಚೇರಿಗಳಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದು’ ಎಂದು ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್. ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.