ADVERTISEMENT

ಅಳವಂಡಿ | ಪ್ರತಿಭಟನೆ ಬಳಿಕ ಸ್ವಚ್ಛವಾಯಿತು ಚರಂಡಿ

‘ಪ್ರಜಾವಾಣಿ’ ವರದಿಗೆ ಅಧಿಕಾರಿಗಳ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2024, 16:12 IST
Last Updated 20 ಜುಲೈ 2024, 16:12 IST
ಕೊಪ್ಪಳ ತಾಲ್ಲೂಕಿನ ಬೆಟಗೇರಿ ಗ್ರಾಮಕ್ಕೆ ಶನಿವಾರ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ ಭೇಟಿ ನೀಡಿದರು
ಕೊಪ್ಪಳ ತಾಲ್ಲೂಕಿನ ಬೆಟಗೇರಿ ಗ್ರಾಮಕ್ಕೆ ಶನಿವಾರ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ ಭೇಟಿ ನೀಡಿದರು   

ಅಳವಂಡಿ: ಇಲ್ಲಿಗೆ ಸಮೀಪದ ಬೆಟಗೇರಿ ಗ್ರಾಮದ ಎಸ್‌.ಸಿ. ಕಾಲೊನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿ ಚರಂಡಿಯಿಂದ ದುರ್ನಾತ ಬೀರುತ್ತಿದ್ದ ಸ್ಥಳಕ್ಕೆ ಶನಿವಾರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆ ಪರಿಹರಿಸಿದರು.

ಈ ಕುರಿತು ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ’ಗ್ರಾ.ಪಂ. ಎದುರು ಮಕ್ಕಳ ಪ್ರತಿಭಟನೆ’ ವರದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ, ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಚಂದ್ರಪ್ಪ ಅವರು ಬೆಟಗೇರಿ ಗ್ರಾಮಕ್ಕೆ ಭೇಟಿ ನೀಡಿ ಚರಂಡಿ ಅವ್ಯವಸ್ಥೆ ಕುರಿತು ಖುದ್ದು ಪರಿಶೀಲಿಸಿದರು. ನಂತರ ಗ್ರಾಮಸ್ಥರೊಂದಿಗೆ ಚರ್ಚಿಸಿದರು.

ಗ್ರಾಮ ಪಂಚಾಯಿತಿಯ ಸ್ವಚ್ಛತಾ ಸಿಬ್ಬಂದಿ ಬುಲ್ಡೋಜರ್‌ ಮೂಲಕ ಚರಂಡಿಗಳಲ್ಲಿದ್ದ ತಾಜ್ಯವನ್ನು ಹೊರತೆಗೆದು ಹಾಕಿದರು. ಬಳಿಕ ತೊದಲಬಾಗಿ ಅವರು ಎಲ್ಲಾ ಚರಂಡಿಗಳನ್ನು ಸ್ವಚ್ಛಗೊಳಿಸಲು ಕ್ರಮ ವಹಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಿಡಿಒ ಮತ್ತು ಸದಸ್ಯರಿಗೆ ತಾಕೀತು ಮಾಡಿದರು. ಬಳಿಕ  ಶಾಲಾ ಮಕ್ಕಳಿಗೆ ಹಾಗೂ ಪಾಲಕರಿಗೆ ಡೆಂಗಿ ಜ್ವರದ ಅಪಾಯದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಪಿಡಿಒ ದಾನಪ್ಪ ಸಂಗಟಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

ADVERTISEMENT
ಪ್ರಜಾವಾಣಿಯಲ್ಲಿ ಪ್ರಕಟವಾದ ವರದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.