ಮುನಿರಾಬಾದ್ (ಕೊಪ್ಪಳ ಜಿಲ್ಲೆ): ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹವಿರುವ ಒಟ್ಟು 105 ಟಿಎಂಸಿ ಅಡಿ ನೀರಿನ ಪೈಕಿ ಕನಿಷ್ಠ 61 ಟಿಎಂಸಿ ಅಡಿ ನೀರು ಹೊರಗಡೆ ಬಿಟ್ಟ ಬಳಿಕವೇ ಕೊಚ್ಚಿ ಹೋಗಿರುವ ಕ್ರಸ್ಟ್ ಗೇಟ್ ಜಾಗಕ್ಕೆ ಹೊಸ ಗೇಟ್ ಅಳವಡಿಸಲು ಸಾಧ್ಯ. ಉಳಿಯುವ ನೀರಿನಲ್ಲಿ ಒಂದು ಬೆಳೆಗೆ ಫಸಲು ಬರುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಇಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ದೇವರ ದಯೆಯಿಂದ ಉತ್ತಮ ಮಳೆಯಾಗಿ ಜಲಾಶಯ ಭರ್ತಿಯಾಗಿತ್ತು. ದುರದೃಷ್ಟವಶಾತ್ ಗೇಟ್ ಕೊಚ್ಚಿ ಹೋಗಿ ಇರುವ ನೀರನ್ನು ಅನಿವಾರ್ಯವಾಗಿ ನದಿಗೆ ಹರಿಸಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಳೆಗಾಲ ಇನ್ನು ಇರುವ ಕಾರಣ ಮಲೆನಾಡಿನ ಭಾಗದಲ್ಲಿ ಮತ್ತಷ್ಟು ಮಳೆಯಾಗುವ ವಿಶ್ವಾಸವಿದೆ. ಮೂರ್ನಾಲ್ಕು ದಿನಗಳಲ್ಲಿ ಹೊಸ ಗೇಟ್ ಅಳವಡಿಸಲಾಗುವುದು. ಬಳಿಕ ಬರುವ ನೀರು ಸಂಗ್ರಹಿಸಲಾಗುವುದು. ರೈತರ ಹಿತರಕ್ಷಣೆಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.