ಕೊಪ್ಪಳ: ಮತದಾನದ ಪ್ರಮಾಣ ಹೆಚ್ಚಿಸಲು ಜಾಗೃತಿ ಮೂಡಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶನಿವಾರ ನಗರದಲ್ಲಿ ಬೈಕ್ ರ‍್ಯಾಲಿ ನಡೆಯಿತು.
ಜಿಲ್ಲಾ ಚುನಾವಣಾಧಿಕಾರಿ ನಲಿನ್ ಅತುಲ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ್ ರತ್ನಂ ಪಾಂಡೆಯ ರ್‍ಯಾಲಿಗೆ ಚಾಲನೆ ನೀಡಿದರು.
ತಾಲ್ಲೂಕು ಕ್ರೀಡಾಂಗಣದಲ್ಲಿ ದ್ವಿಚಕ್ರ ವಾಹನಗಳೊಂದಿಗೆ ಅಧಿಕಾರಿಗಳು, ಸಿಬ್ಬಂದಿಯನ್ನು ಒಳಗೊಂಡ ತಂಡ ವೃತ್ತ ನಿರ್ಮಿಸಿ ಅದರೊಳಗೆ ಘೋಷ ವಾಕ್ಯ ರಚಿಸಲಾಗಿತ್ತು. ರ‍್ಯಾಲಿಯು ತಾಲ್ಲೂಕು ಕ್ರೀಡಾಂಗಣದಿಂದ ಆರಂಭಗೊಂಡು ಅಶೋಕ ವೃತ್ತ, ಬಸ್‌ನಿಲ್ದಾಣ, ಕಾರ್ಮಿಕ ವೃತ್ತದ ಮಾರ್ಗವಾಗಿ ಭಾಗ್ಯನಗರಕ್ಕೆ ತೆರಳಿ ಪ್ರಮುಖ ವಾರ್ಡ್‌ಗಳಲ್ಲಿ ಸಂಚರಿಸಿ, ಅಲ್ಲಿಂದ ಓಜನಹಳ್ಳಿ ಗ್ರಾಮದಲ್ಲಿ ಸಂಚರಿಸಿ ಭಾಗ್ಯನಗರ ಕಿನ್ನಾಳ ರಸ್ತೆ ಮೂಲಕ ಅಶೋಕ ವೃತ್ತದ ಮಾರ್ಗವಾಗಿ ತಾಲ್ಲೂಕು ಕ್ರೀಡಾಂಗಣಕ್ಕೆ ತೆರಳಿತು. ಈ ಮಾರ್ಗದುದ್ದಕ್ಕೂ ಸಿಇಒ ಪಾಂಡೆಯ ಬೈಕ್ ಮೇಲೆಯೇ ಸಂಚರಿಸಿ ಜಾಗೃತಿ ಮೂಡಿಸಿದ್ದು ವಿಶೇಷವಾಗಿತ್ತು.
ಕೊಪ್ಪಳ ನಗರಸಭೆ, ಭಾಗ್ಯನಗರ ಪಟ್ಟಣ ಪಂಚಾಯಿತಿ ಕಸ ವಿಲೇವಾರಿ ವಾಹನಗಳಲ್ಲಿ ಮತದಾನ ಜಾಗೃತಿ ಗೀತೆಗಳನ್ನು ಪ್ರಸಾರ ಮಾಡುವ ಮೂಲಕವೂ ಅರಿವು ಮೂಡಿಸಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಂಗಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ್ ಬಿರಾದಾರ, ಜಿ.ಪಂ ಸಹಾಯಕ ಕಾರ್ಯದರ್ಶಿ ಶಿವಪ್ಪ ಸುಬೇದಾರ, ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲೆ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ ಜುಮ್ಮಣ್ಣನವರ, ತಾಲ್ಲೂಕ ಶಿಕ್ಷಕರ ಸಂಘದ ಅಧ್ಯಕ್ಷ ಶರಣೇಗೌಡ, ಜಿಲ್ಲಾ ಸ್ವೀಪ್ ಸಂಯೋಜಕ ಶ್ರೀನಿವಾಸ ಚಿತ್ರಗಾರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.