ADVERTISEMENT

ಬಿಜೆಪಿಯಿಂದ 'ನಮ್ಮ ಭೂಮಿ ನಮ್ಮ ಹಕ್ಕು' ಆಂದೋಲನ: ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 8:03 IST
Last Updated 22 ನವೆಂಬರ್ 2024, 8:03 IST
   

ಕೊಪ್ಪಳ: ರಾಜ್ಯದ ಅನೇಕ ಕಡೆ ರೈತರ ಜಮೀನಿನ ಪಹಣಿಯಲ್ಲಿ ನಮೂದಿಸಿರುವ ವಕ್ಫ್ ಹೆಸರು ತೆಗೆದು ಹಾಕಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಇಲ್ಲಿನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ನಮ್ಮ ಭೂಮಿ‌ ನಮ್ಮ ಹಕ್ಕು ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಪಕ್ಷವು ಓಲೈಕೆ ರಾಜಕಾರಣ ಮಾಡುತ್ತಿದೆ. ವಕ್ಫ್ ಹೆಸರಿನಲ್ಲಿ ರೈತರ ಜಮೀನು, ಮಠಮಾನ್ಯಗಳ ಜಾಗವನ್ನು ಕಬಳಿಸುವ ಹುನ್ನಾರ ನಡೆದಿದೆ. ಸಿಂದಗಿ ವಿರಕ್ತ ಮಠದ ಭೂಮಿ‌ ನುಂಗಿದ ಸರ್ಕಾರಕ್ಕೆ ಧಿಕ್ಕಾರ, ಸಿದ್ದರಾಮಯ್ಯ-ಜಮೀರ್ ಕುತಂತ್ರಕ್ಕೆ ಧಿಕ್ಕಾರವಿರಲಿ, ವಕ್ಫ್ ಅದಾಲತ್ ಹೆಸರಿನಲ್ಲಿ ರೈತರ ಬಾಯಿಗೆ ಮಣ್ಣು ಹಾಕುತ್ತಿರುವ ಜಮೀರ್ ಕುತಂತ್ರಕ್ಕೆ ಧಿಕ್ಕಾರ ಎನ್ನುವ ಭಿತ್ತಿಪತ್ರಗಳನ್ನು ಬಿಜೆಪಿ ಮುಖಂಡರು ಪ್ರದರ್ಶಿಸಿದರು.

ಕಾಡಾ ಮಾಜಿ ಅಧ್ಯಕ್ಷ

ADVERTISEMENT

ಬಿ.ಎಚ್.ಎಂ. ತಿಪ್ಪೇರುದ್ರಸ್ವಾಮಿ ರಾಜ್ಯ ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ರೈತರ ಆಸ್ತಿ ಪಾಕಿಸ್ತಾನದಿಂದ ಬಂದ ಭೂಮಿ ಅಲ್ಲ‌. ರೈತರ ಹೊಟ್ಟೆ ಉರಿಸುತ್ತಿರುವ ರಾಜ್ಯ ಸರ್ಕಾರ ಉದ್ದಾರ ಆಗಲ್ಲ ಎಂದು ಹರಿಹಾಯ್ದರು.

ಶಾಸಕ ಜನಾರ್ದನ ರೆಡ್ಡಿ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ಮಾಜಿ ಶಾಸಕರಾದ ಬಸವರಾಜ ದಢೇಸೂಗೂರು, ಶರಣು ತಳ್ಳಿಕೇರಿ, ಮಹಾಂತೇಶ ಪಾಟೀಲ ಮೈನಳ್ಳಿ, ಗಣೇಶ ಹೊರತಟ್ನಾಳ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.