ಗಂಗಾವತಿ (ಕೊಪ್ಪಳ ಜಿಲ್ಲೆ): ತುಂಗಭದ್ರಾ ಜಲಾಶಯದಿಂದ ನದಿಗೆ ಶನಿವಾರ 50ರಿಂದ 80 ಸಾವಿರ ಕ್ಯುಸೆಕ್ ನೀರು ಹರಿಸಲಾಗಿದ್ದು, ತಾಲ್ಲೂಕಿನ ವಿರೂಪಾಪುರಗಡ್ಡೆ, ನವವೃಂದಾವನಗಡ್ಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಆನೆಗೊಂದಿ ಭಾಗದ ಕೆಲ ದೇವಾಲಯ, ಮಂಟಪಕ್ಕೆ ನೀರು ನುಗ್ಗಿದೆ.
ತುಂಗಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಪರಿಣಾಮ ಜಲಾಶಯದಲ್ಲಿ ನೀರಿನ ಸಂಗ್ರಹ ಪ್ರಮಾಣ ಹೆಚ್ಚಾಗಿದೆ.
ಮುಂಜಾಗ್ರತೆಯಾಗಿ ತುಂಗಭದ್ರಾ ಜಲಾಶಯಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಜಲಾಶಯ ಮಂಡಳಿಯವರು ನದಿಗೆ ನೀರು ಹರಿಬಿಟ್ಟಿದ್ದಾರೆ. ಇದರಿಂದ ವಿರೂಪಾಪುರಗಡ್ಡೆ, ನವವೃಂದಾವನಗಡ್ಡೆ ರಸ್ತೆ ಸಂಪರ್ಕ ಕಡಿತವಾಗಿ ಆನೆಗೊಂದಿ ಬಳಿಯ 64 ಸಾಲಿನ ಮಂಟಪ ಜಲಾವೃತವಾಗಿದೆ. ಜನರಿಗೆ ನದಿಪಾತ್ರಕ್ಕೆ ತೆರಳದಂತೆ ಪೊಲೀಸರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.