ಗಂಗಾವತಿ (ಕೊಪ್ಪಳ ಜಿಲ್ಲೆ): ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಗುರುವಾರ ಸಂಜೆ ಸಾಕಷ್ಟು ನೀರನ್ನು ಹೊರಬಿಡಲಾಗಿದೆ. ಇದರಿಂದಾಗಿ ತಾಲ್ಲೂಕಿನ ವಿರೂಪಾಪುರಗಡ್ಡೆ, ನವವೃಂದಾವನಗಡ್ಡೆ ಸಂಚಾರ ಸಂಪರ್ಕ ಕಡಿತವಾಗಿದೆ.
ನದಿಗೆ ನೀರು ಹರಿದ ಪರಿಣಾಮ ಸಾಣಾಪುರದ ಬಳಿ ವಾಟರ್ ಫಾಲ್ಸ್, ಋಷಿಮುಖ ಪರ್ವತ, ಚಿಂತಾಮಣಿ ಸೇರಿ ನವವೃಂದಾವನಗಡ್ಡೆ ಸಂಚಾರ ಸಂಪರ್ಕ ಕಡಿತವಾಗಿದೆ. ಆನೆಗೊಂದಿ ಗ್ರಾಮದ ತುಂಗಭದ್ರಾ ನದಿಯಲ್ಲಿರುವ 64 ಸಾಲಿನಮಂಟಪ ಬಹುತೇಕ ಭಾಗ ಮುಳುಗಡೆಯಾಗಿದೆ. ತಾಲ್ಲೂಕು ಆಡಳಿತವು ಸಾಣಾಪುರ, ಆನೆಗೊಂದಿ, ಸಂಗಾಪುರ ಅಧಿಕಾರಿಗಳು ನದಿಪಾತ್ರಕ್ಕೆ ಸಾರ್ವಜನಿಕರು ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನದಿಪಾತ್ರದ ಬಳಿ ಅಲ್ಲಲ್ಲಿ ಪೊಲೀಸರನ್ನು ನಿಯೋಜಿಸಿದೆ.
ಹುಚ್ಚಾಟ: ಯಾರೂ ನದಿಪಾತ್ರಕ್ಕೆ ತೆರಳಬಾರದು ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ, ತಾಲ್ಲೂಕು ಆಡಳಿತ, ಗ್ರಾ.ಪಂ ಅಧಿಕಾರಿಗ…
ತುರ್ತು ಸಂದರ್ಭಕ್ಕೆ ಸಹಾಯವಾಣಿ ಆರಂಭ
ತುರ್ತು ಸಂದರ್ಭದಲ್ಲಿ ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಕೊಪ್ಪಳ 9164258531, 9900324711, ಗಂಗಾವತಿ 9740793877, 9964221162, ಕಾರಟಗಿ 8792429600 ಸಾರ್ವಜನಿಕರು ಕರೆ ಮಾಡಬಹುದು.
ಸುರಕ್ಷಿತ ಸ್ಥಳಕ್ಕೆ ತೆರಳಲು ಮನವಿ: ನದಿ ಪಾತ್ರ, ದಂಡೆ ಮತ್ತು ನದಿಯ ಅಸುಪಾಸಿನಲ್ಲಿ ವಾಸಿಸುವ ಗ್ರಾಮಗಳ ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ತಿಳಿಸಿದ್ದಾರೆ.
ಗುರುವಾರದ ಸಂಜೆ 7 ಗಂಟೆಯ ಮಾಹಿತಿ ಪ್ರಕಾರ 98,450 ಒಳಹರಿವು ಇದ್ದು, 90,317 ಕ್ಯುಸೆಕ್ ನೀರು ನದಿಗಳಿಗೆ ಬಿಡಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ನೀರು ಬಿಡುಗಡೆ ಪ್ರಮಾಣ ಇನ್ನಷ್ಟು ಹೆಚ್ಚಾಗಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.