ಯಲಬುರ್ಗಾ: ತಾಲ್ಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಹೊರವಲಯದ ಕನಕ ಭವನದಲ್ಲಿ ತಾತ್ಕಾಲಿಕವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭವಾಗಲಿರುವ ಸ್ಥಳಕ್ಕೆ ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ‘ಗ್ರಾಮದಲ್ಲಿ ಕನಕ ಭವನದಲ್ಲಿ ಆರೋಗ್ಯ ಕೇಂದ್ರ ಪ್ರಾರಂಭಿಸಲು ಆಯ್ಕೆ ಮಾಡಲಾಗಿದೆ. ಅದಕ್ಕಾಗಿ ತಾ.ಪಂನಿಂದ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ಸೂಚಿಸಲಾಗಿದೆ. ರೋಗಿ ಮತ್ತು ಸಿಬ್ಬಂದಿಗೆ ಪ್ರತ್ಯೇಕ ಕೌಂಟರ್, ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಇನ್ನಿತರ ಮೂಲ ಸೌಕರ್ಯಗಳನ್ನು ಕಲ್ಪಿಸಿ, ಕೊಡಲು ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ. ತ್ವರಿತಗತಿಯಲ್ಲಿ ಸಣ್ಣ ಪುಟ್ಟ ಕೆಲಸಗಳನ್ನು ಪೂರ್ಣಗೊಳಿಸಿ, ಶೀಘ್ರದಲ್ಲೇ ಕೇಂದ್ರ ಆರಂಭವಾಗಲಿದೆ. ಇದಕ್ಕೆ ಆರೋಗ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜಿಸಲು ನಿರ್ದೇಶನ ನೀಡಲಾಗಿದೆ. ಗ್ರಾಮದ ಜನರ ಆರೋಗ್ಯ ಸುಧಾರಣೆ ಮತ್ತು ಸಂರಕ್ಷಣೆಗೆ ಅನುಕೂಲಕ್ಕಾಗಿ ಕೇಂದ್ರವನ್ನು ಆರಂಭಿಸಲಾಗುತ್ತಿದೆ’ ಎಂದರು.
ತಹಶೀಲ್ದಾರ್ ಬಸವರಾಜ ತೆನ್ನಳ್ಳಿ, ತಾ.ಪಂ ಇಒ ಸಂತೋಷ ಪಾಟೀಲ ಬಿರಾದಾರ, ಪಿಆರ್‌ಇಡಿ ಎಇಇ ಶ್ರೀಧರ ತಳವಾರ, ಎಂಜಿನಿಯರ್ ಪ್ರವೀಣ ನಾಗನೂರ, ಪಿಡಿಒ ವೆಂಕಟೇಶ ನಾಯಕ, ಗುತ್ತಿಗೆದಾರ ನಿಂಗಪ್ಪ ಕಮತರ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.