ADVERTISEMENT

‘ಶಿಸ್ತುಬದ್ಧ ಅಧ್ಯಯನದಿಂದ ಯಶಸ್ಸು’

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 14:23 IST
Last Updated 3 ಜುಲೈ 2024, 14:23 IST
ಯಲಬುರ್ಗಾ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಅಡಿಯಲ್ಲಿ ಬುಧವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆ ಕುರಿತ ತರಬೇತಿ ಕಾರ್ಯಾಗಾರಕ್ಕೆ ಗಣ್ಯರು ಚಾಲನೆ ನೀಡಿದರು
ಯಲಬುರ್ಗಾ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಅಡಿಯಲ್ಲಿ ಬುಧವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆ ಕುರಿತ ತರಬೇತಿ ಕಾರ್ಯಾಗಾರಕ್ಕೆ ಗಣ್ಯರು ಚಾಲನೆ ನೀಡಿದರು   

ಯಲಬುರ್ಗಾ: ‘ಪದವಿ ಹಂತದಲ್ಲಿಯೇ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ಸಿದ್ಧತೆ ಮಾಡಿಕೊಂಡರೆ ಬಹುಬೇಗ ಯಶಸ್ಸು ಕಂಡುಕೊಳ್ಳಲು ಸಾಧ್ಯ’ ಎಂದು ಭೂಮಿ ಸ್ಟಡಿ ಸರ್ಕಲ್‍ನ ಸಂಪನ್ಮೂಲ ವ್ಯಕ್ತಿ ಮಹೇಶ ಪಟ್ಟೇದ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಉದ್ಯೋಗ ಮಾಹಿತಿ ಘಟಕಗಳ ಸಹಯೋಗದ ಅಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ನಡೆದ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ‘ನಿರಂತರ ಅಧ್ಯಯನ, ಪರಿಶ್ರಮ ಹಾಗೂ ಇಚ್ಚಾಶಕ್ತಿಯಿಂದ ಮಾತ್ರ ಗುರಿ ತಲುಪಲು ಸಾಧ್ಯವಿದೆ. ಸ್ಪರ್ಧಾತ್ಮಕ ಯುಗದಲ್ಲಿ ವಿಶೇಷ ಕ್ರಿಯಾಶೀಲತೆ, ಕೌಶಲಯುಕ್ತ ಚಟುವಟಿಕೆಗಳ ಅಗತ್ಯವಿದೆ. ಉನ್ನತ ಹುದ್ದೆಗಳಿಗೆ ಆಯ್ಕೆಯಾಗಬೇಕಾದರೆ ಶಿಸ್ತುಬದ್ಧ ಅಧ್ಯಯನ ಕ್ರಮ ರೂಢಿಸಿಕೊಳ್ಳಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಕೆ.ಎಚ್. ಛತ್ರದ, ಸಹಾಯಕ ಪ್ರಾಧ್ಯಾಪಕ ಎಚ್.ಎಂ. ಗುಡಿಹಿಂದಿನ, ವಿರೇಶ ಗಜೇಂದ್ರಗಡ ಮಾತನಾಡಿದರು.

ADVERTISEMENT

ಸಹಾಯಕ ಪ್ರಾಧ್ಯಾಪಕ ವಿನೋದ ಎಸ್., ಶಶಿಕುಮಾರ, ಶರಣಪ್ಪ ತಳವಾರ, ಹನುಮನಗೌಡ ಸೇರಿ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.