ADVERTISEMENT

ಕನ್ನಡ ಸಾಹಿತ್ಯ ಸಮ್ಮೇಳನ: ಸಚಿವರಿಂದ ಸ್ಥಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2024, 6:23 IST
Last Updated 14 ಜುಲೈ 2024, 6:23 IST
   

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್‌ 20, 21, 22ರಂದು ನಡೆಯಲಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಭಾನುವಾರ ಸ್ಥಳ ಪರಿಶೀಲನೆ ನಡೆಸಿದರು.

ನಗರದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ಹಾಗೂ ಚಿಕ್ಕಮಂಡ್ಯ ಕೆರೆಯಂಗಳದಲ್ಲಿ ಸಾಹಿತ್ಯ ಸಮ್ಮೇಳನ ಆಯೋಜಿಸುವ ಸಂಬಂಧ ಸ್ಥಳ ಪರಿಶೀಲನೆ ನಡೆಸಿದರು.

ಪರಿಶೀನೆಯ ವೇಳೆ ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.