ಮಳವಳ್ಳಿ: ತಾಲ್ಲೂಕು ಮತ್ತು ಜಿಲ್ಲಾ ಘಟಕದಲ್ಲಿ ಪಕ್ಷದ ಪದಾಧಿಕಾರಿಯಾಗಬೇಕಾದರೆ ಕನಿಷ್ಠ 50 ಮಂದಿಯನ್ನು ಸದಸ್ಯರನ್ನಾಗಿ ನೋಂದಾಯಿಸುವುದು ಕಡ್ಡಾಯ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎನ್. ಕೃಷ್ಣ ತಿಳಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಸದಸ್ಯತ್ವ ಅಭಿಯಾನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಸೆ.2ರಿಂದ ನ.15ವರೆಗೂ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ದೇಶದಲ್ಲಿ 11 ಕೋಟಿ, ರಾಜ್ಯದಲ್ಲಿ 75 ಲಕ್ಷ, ಜಿಲ್ಲೆಯಲ್ಲಿ 2 ಲಕ್ಷ ಸದಸ್ಯತ್ವ ಮತ್ತು ತಾಲ್ಲೂಕು 14 ಸಾವಿರಕ್ಕೂ ಅಧಿಕ ಮಂದಿ ಸದಸ್ಯತ್ವ ಪಡೆದಿದ್ದರೆ’ ಎಂದು ಸಂತಸ ವ್ಯಕ್ತಪಡಿಸಿದರು.
‘ಪಕ್ಷದ ಕೆಲಸ ಮಾಡುವ ಸಾಮಾನ್ಯ ಕಾರ್ಯಕರ್ತರಿಗೂ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನಗಳು ಸಿಗಲಿವೆ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಹೆಚ್ಚಿನ ಸದಸ್ಯತ್ವ ನೊಂದಾಯಿಸಿ ಪಕ್ಷದ ಸಂಘಟನೆಯ ಮುಂದಾಗಬೇಕು’ ಎಂದು ಕರೆ ನೀಡಿದರು.
ತಾಲ್ಲೂಕಿನಲ್ಲಿ ಅತೀ ಹೆಚ್ಚು ಅಂದರೆ 1534 ಸದಸ್ಯತ್ವ ನೋಂದಾಯಿಸಿದ ಹಲಗೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋದಿ ರವಿ ಅವರನ್ನು ಅಭಿನಂಧಿಸಲಾಯಿತು.
ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ತಾಲ್ಲೂಕು ಬಿಜೆಪಿ ಉಸ್ತುವಾರಿ ನರಸಿಂಹಚಾರ್, ಪ್ರಧಾನ ಕಾರ್ಯದರ್ಶಿಗಳಾದ ಆನಂದ್, ನಾಗೇಶ್, ಮಹಿಳಾ ಘಟಕದ ಅಧ್ಯಕ್ಷೆ ಶಕುಂತಲಾ, ಜಿಲ್ಲಾ ಘಟಕದ ಉಪಾಧ್ಯಕ್ಷ ಹೆಬ್ಬಣಿ ಬಸವರಾಜು, ಜಾಲತಾಣದ ಅಧ್ಯಕ್ಷ ಉಮೇಶ್, ಮುಖಂಡರಾದ ಆರ್.ಗಂಗಾಧರ್, ರಘು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.