ADVERTISEMENT

ಹಲಗೂರು: ಮಾರಕಾಸ್ತ್ರಗಳಿಂದ ಇರಿದು ಯುವಕನ ಹತ್ಯೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 13:44 IST
Last Updated 1 ಆಗಸ್ಟ್ 2024, 13:44 IST
ಮೃತ ಕಾಂತರಾಜು
ಮೃತ ಕಾಂತರಾಜು   

ಹಲಗೂರು: ಇಲ್ಲಿಗೆ ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದ ನಿವಾಸಿ ಕಾಂತರಾಜು (28)ಎಂಬ ಯುವಕನನ್ನು  ಬುಧವಾರ ರಾತ್ರಿ ದೇವಿರಹಳ್ಳಿ ಗೇಟ್ ಬಳಿ ಮಾರಕಾಸ್ತ್ರಗಳಿಂದ ಇರಿದು ಹತ್ಯೆ ಮಾಡಲಾಗಿದೆ.

 ವಿನೋದ್ ಕುಮಾರ್ ಅಲಿಯಾಸ್ ಕುಮ್ಮಿ ಮತ್ತು ಕಾಂತರಾಜು ಅವರು ಕುಳಿತಿದ್ದ ಸ್ಥಳಕ್ಕೆ ಬಂದ ಅಪರಿಚಿತರು ವಿನೋದ್ ಕುಮಾರ್ ಮೇಲೆ ಮಾರಾಕಾಸ್ತ್ರಗಳಿಂದ ಏಕಾಏಕಿ ದಾಳಿ ನಡೆಸಿದರು. ಇದನ್ನು ತಡೆಯಲು ಹೋದ ಕಾಂತರಾಜುಗೆ ಬಲವಾಗಿ ಇರಿದು ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡ ಕಾಂತರಾಜು ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರ ಗಾಯಗೊಂಡ ವಿನೋದ್ ಕುಮಾರ್ ಅಲಿಯಾಸ್ ಕುಮ್ಮಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಳೆ ದ್ವೇಷದ ಹಿನ್ನಲೆಯಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ADVERTISEMENT

ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಈ.ತಿಮ್ಮಯ್ಯ, ಡಿ.ವೈ.ಎಸ್.ಪಿ. ಕೃಷ್ಣಪ್ಪ, ವೃತ್ತ ನಿರೀಕ್ಷಕ ಬಿ.ಎಸ್.ಶ್ರೀಧರ್ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೃತ್ಯದ ಬಗ್ಗೆ ಮಾಹಿತಿ ಪಡೆದು, ತನಿಖಾಧಿಕಾರಿಗೆ ಪ್ರಕರಣದ ತನಿಖೆ ಮತ್ತು ಆರೋಪಿಗಳ ಪತ್ತೆ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿದರು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.