ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಪಾಲಹಳ್ಳಿ ಮತ್ತು ಹೊಸಹಳ್ಳಿ ನಡುವೆ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಬಾಲ ನಟ ರೋಹಿತ್ (14) ಸೇರಿ ಐದು ಮಂದಿ ತೀವ್ರ ಗಾಯಗೊಂಡಿದ್ದಾರೆ.
ಪಾಂಡವಪುರದ ರೋಹಿತ್ ಅವರ ‘ಒಂದಲ್ಲಾ ಎರಡಲ್ಲಾ’ ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ. ‘ಕಾಟೇರ’ ಚಲನಚಿತ್ರ ದಲ್ಲೂ ನಟಿಸಿದ್ದಾರೆ. ಅವರ ತಾಯಿ ಛಾಯಾಲಕ್ಷ್ಮಿ ಅವರ ಒಂದು ಕೈ ಮತ್ತು ಒಂದು ಕಾಲು ಮುರಿದಿದೆ. ಇದೇ ಕಾರಿನಲ್ಲಿದ್ದ ರೋಹಿತ್ ಸ್ನೇಹಿತ ಯಶಸ್, ಆರಾಧನಾ ಕಾಲೇಜಿನ ಉಪನ್ಯಾಸಕರಾದ ಕೇಶವ್ ಮತ್ತು ಶ್ರೀಕಾಂತ್ ಗಾಯಗೊಂಡಿದ್ದಾರೆ. ಶ್ರೀಕಾಂತ್ ಕಾರು
ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ.
ಗಾಯಗೊಂಡವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಲ್ಲೂಕಿನ ಹೊಸಹಳ್ಳಿ ಬಳಿಯ ಆರಾಧನಾ ಕಾಲೇಜಿನಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ರೋಹಿತ್, ಅವರ ತಾಯಿ ಮತ್ತು ಸ್ನೇಹಿತರನ್ನು ಕಾಲೇಜಿನ ಮುಖ್ಯಸ್ಥ ಯೋಗಣ್ಣ ಅವರ ಕಾರಿನಲ್ಲಿ ಪಾಂಡವಪುರದಿಂದ ಕರೆತರುವಾಗ ಈ ಅವಘಡ ಸಂಭವಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.