ADVERTISEMENT

ಆದಿಚುಂಚನಗಿರಿ: ಸಂಭ್ರಮದ ಲಕ್ಷ ದೀಪೋತ್ಸವ

ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2022, 5:40 IST
Last Updated 24 ನವೆಂಬರ್ 2022, 5:40 IST
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ನಡೆದ ಲಕ್ಷ ದೀಪೋತ್ಸವವನ್ನು ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ನಡೆದ ಲಕ್ಷ ದೀಪೋತ್ಸವವನ್ನು ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು   

ನಾಗಮಂಗಲ: ತಾಲ್ಲೂಕಿನ ಆದಿಚುಂಚನಗಿರಿ ಮಠದಲ್ಲಿ ಕಾರ್ತಿಕ ಮಾಸದ ಅಮಾವಾಸ್ಯೆ ಪ್ರಯುಕ್ತ ಬುಧವಾರ ಸಂಜೆ ಆಯೋಜಿಸಿದ್ದ ಲಕ್ಷ ದೀಪೋತ್ಸವಕ್ಕೆ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು.

ಕ್ಷೇತ್ರಾಧಿದೇವತೆಗಳ ದೇವಾಲಯ ಗಳಲ್ಲಿ ವಿಶೇಷ ಪೂಜೆಗಳು ಜರುಗಿದವು. ಮಠದ ಆವರಣದ ನವಗ್ರಹ ಮಂಟಪದಲ್ಲೂ ವಿಶೇಷ ಪೂಜೆ ನಡೆಯಿತು. ಕಾಲಭೈರವೇಶ್ವರಸ್ವಾಮಿ ದೇವಾಲಯದ ಮುಂದೆ ಸ್ವಾಮೀಜಿ ಲಕ್ಷ ದೀಪೋತ್ಸವ ಉದ್ಘಾಟಿಸಿದರು. ನಂತರ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ದೀಪಗಳನ್ನು ಬೆಳಗಿಸಿದರು.

ಮಠದಲ್ಲಿರುವ ಕಾಲಭೈರವೇಶ್ವರ ಸ್ವಾಮಿ,ಸ್ಥಂಭಾಬಿಕೆ ದೇವಿ ಮತ್ತು ಬಾಲಗಂಗಾಧರನಾಥ ಸ್ವಾಮೀಜಿ ಗದ್ದುಗೆಗಳನ್ನು ಅಲಂಕರಿಸಿ ಪೂಜೆ ನೆರವೇರಿಸಲಾಯಿತು. ವಿವಿಧೆಡೆಯಿಂದ ಬಂದಿದ್ದ ಮಹಿಳೆಯರು ಕುಂಬಳಕಾಯಿಯಲ್ಲಿ ದೀಪವನ್ನು ಸಿದ್ಧಪಡಿಸಿ ಆರತಿ ಬೆಳಗಿದರು.

ADVERTISEMENT

ಈ ವೇಳೆ ಪ್ರಸನ್ನನಾಥ ಸ್ವಾಮೀಜಿ, ಪುರುಷೋತ್ತಮಾನಂದನಾಥ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.