ADVERTISEMENT

ನವಜೀವನಕ್ಕೆ ಮದ್ಯವರ್ಜನ ಶಿಬಿರ: ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 14:26 IST
Last Updated 22 ನವೆಂಬರ್ 2024, 14:26 IST
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿರುವ 1887ನೇ ಮದ್ಯವರ್ಜನಾ ಶಿಬಿರಕ್ಕೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಚಾಲನೆ ನೀಡಿದರು
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿರುವ 1887ನೇ ಮದ್ಯವರ್ಜನಾ ಶಿಬಿರಕ್ಕೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಚಾಲನೆ ನೀಡಿದರು   

ಕೆ.ಆರ್.ಪೇಟೆ: ಮದ್ಯವ್ಯಸನಿಗಳನ್ನು ವ್ಯಸನ ಮುಕ್ತಗೊಳಿಸಿ ಕುಟುಂಬದ ಸದಸ್ಯರೊಂದಿಗೆ ನವಜೀವನ ನಡೆಸುವಂತೆ ಮಾಡಲು ಮದ್ಯವರ್ಜನ ಶಿಬಿರಗಳು ಸಹಾಯಕವಾಗಿದ್ದು, ಸದುಪಯೋಗ ಪಡೆದುಕೊಳ್ಳುವಂತೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹೇಳಿದರು.

ತಾಲ್ಲೂಕಿನ ಬೂಕನಕೆರೆ ಗ್ರಾಮದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆ.ಆರ್.ಪೇಟೆ ಘಟಕವು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಚನ್ನರಾಯಪಟ್ಟಣ, ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ, ಉಜಿರೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ಬೂಕನಕೆರೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ 1887ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸಪ್ತವ್ಯಸನಗಳಲ್ಲಿ ಮದ್ಯಪಾನ ಮೊದಲು ಮೆಟ್ಟಿಲು, ಆದನ್ನು ಜಾರಿದರೆ ಉಳಿದೆಲ್ಲವೂ ಜಾರಿದಂತೆ ಎಂದು ಧರ್ಮಾಧಿಕಾರಿಯವರು ನುಡಿದಿದ್ದಾರೆ. ಹಾಗಾಗಿ ದುಶ್ಚಟಗಳು ಹಾಗೂ ವ್ಯಸನಗಳಿಂದ ಮುಕ್ತವಾದ ಸಮಾಜದ ನಿರ್ಮಾಣಕ್ಕೆ ಒತ್ತು ನೀಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೆಲಸ ಮಾಡುತ್ತಿದೆ. ಕುಡಿತ ಸೇರಿದಂತೆ ವ್ಯಸನಗಳಿಂದ ಬಳಲುತ್ತಿರುವವರು ಇದರ ಸದುಪಯೋಗ ಪಡೆದುಕೊಂಡು ತಮ್ಮ ಜೀವನವನ್ನು ಸರಿಯಾದ ದಾರಿಯಲ್ಲಿ ರೂಪಿಸಿಕೊಳ್ಳುವಂತೆ ಮನವಿ ಮಾಡಿದರು.

ADVERTISEMENT

ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ಮಾತನಾಡಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ತಾಲ್ಲೂಕಿನಲ್ಲಿ ಸಾವಿರಾರು ಕುಟುಂಬಗಳ ಆರ್ಥಿಕ ಸ್ಥಿತಿ ಉತ್ತಮಗೊಳಿಸಿ ಸ್ವಾವಲಂಬನೆಯ ಜೀವನ ನೆಡೆಸಲು ಸಹಕಾರಿಯಾಗಿದೆ. ಮದ್ಯದ ಚಟದ ಪರಿಣಾಮ ಸಂಕಷ್ಟದ ಪರಿಸ್ಥಿತಿಯಲ್ಲಿರುವ ಕುಟುಂಬಗಳ ರಕ್ಷಣೆಗಾಗಿ ಮದ್ಯವರ್ಜನ್ಯ ಶಿಬಿರವನ್ನು ನಡೆಸಿಕೊಂಡು ಬರುತ್ತಿದೆ ಎಂದರು.

ಬೂಕನಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಆರ್.ಶ್ಯಾಮ್ ಪ್ರಸಾದ್, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಮುಖಂಡರಾದ ಬಿ. ಜವರಾಯಿಗೌಡ, ಹುಲ್ಲೇಗೌಡ, ಬಿ.ಟಿ.ವೆಂಕಟೇಶ್, ವಕೀಲ ಕುರುಬಹಳ್ಳಿ ನಾಗೇಶ್, ಕೆ.ಎಸ್. ರಾಜೇಶ್, ಶೀಳನೆರೆ ಅಂಬರೀಷ್, ಬೂಕನಕೆರೆ ನಾಗರಾಜು, ಚೋಕನಹಳ್ಳಿ ಪ್ರಕಾಶ್, ಯೋಜನಾಧಿಕಾರಿ ತಿಲಕ್ ರಾಜ್, ಹಿರಿಯ ವೈದ್ಯಾಧಿಕಾರಿ ಡಾ. ವೆಂಕಟೇಶ್, ಪಿಡಿಒ ನರಸಿಂಹರಾಜು, ಪದ್ಮ ಜ್ಯೋತಿ , ಶಿಬಿರಾಧಿಕಾರಿ ಕುಮಾರ್, ಯೋಜನೆಯ ಮೇಲ್ವಿಚಾರಕ ಪ್ರಕಾಶ್ ಆಚಾರ್ಯ ಸೇರಿದಂತೆ, ಧರ್ಮಸ್ಥಳ ಸಂಘದ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಗ್ರಾಮಸ್ಥರು ಭಾಗವಹಿಸಿದ್ದರು.

ನಂತರ ನಡೆದ ಶಿಬಿರಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಗುಂಪು ಸಲಹೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾಹಿತಿ ಬಲ್ಲೇನಹಳ್ಳಿ ಮಂಜುನಾಥ್ ಉಪನ್ಯಾಸ ನೀಡಿದರು. ಶಿಬಿರದಲ್ಲಿ 60ಕ್ಕೂ ಅಧಿಕ ಮದ್ಯವ್ಯಸನಿಗಳು ಭಾಗವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.