ADVERTISEMENT

ಆ.23ರಂದು ಪಶ್ಚಿಮವಾಹಿನಿಯಲ್ಲಿ ವಾಜಪೇಯಿ ಚಿತಾಭಸ್ಮ ವಿಸರ್ಜನೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2018, 14:17 IST
Last Updated 21 ಆಗಸ್ಟ್ 2018, 14:17 IST

ಮಂಡ್ಯ: ‘ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ಆ.23ರಂದು ಶ್ರೀರಂಗಪಟ್ಟಣ ತಾಲ್ಲೂಕಿನ ಕಾವೇರಿ ನದಿ ತೀರ ಪಶ್ಚಿಮವಾಹಿನಿಯಲ್ಲಿ ವಿಸರ್ಜನೆ ಮಾಡಲಾಗುವುದು’ ಎಂದು ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಮಲ್ಲಿಕಾರ್ಜುನ ಹೇಳಿದರು.

‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಮುಖಂಡ ಆರ್‌.ಅಶೋಕ್‌ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ನಡೆಸಿ ಚಿತಾಭಸ್ಮ ವಿಸರ್ಜನೆ ಮಾಡಲಾಗುವುದು. ಬೆಂಗಳೂರಿನ ಬಿಜೆಪಿ ಕಾರ್ಯಾಲಯದಿಂದ ಚಿತಾಭಸ್ಮ ಹೊರಡಲಿದ್ದು ಮಧ್ಯಾಹ್ನ 1 ಗಂಟೆಗೆ ಮದ್ದೂರಿನ ಕೊಲ್ಲಿ ಸರ್ಕಲ್‌ ತಲುಪಲಿದೆ. ಬಿಜೆಪಿ ಕಾರ್ಯಕರ್ತರು ಸ್ವಾಗತ ಕೋರುವರು. ನಗರದ ಫ್ಯಾಕ್ಟರಿ ಸರ್ಕಲ್‌, ಶ್ರೀರಂಗಪಟ್ಟಣ ತಾಲ್ಲೂಕಿನ ಬಾಬುರಾಯನಕೊಪ್ಪಲು ಮಾರ್ಗವಾಗಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಕೊಂಡೊಯ್ಯುವರು. ಮಧ್ಯಾಹ್ನ 3.30ಕ್ಕೆ ಚಿತಾಭಸ್ಮ ವಿಸರ್ಜನೆ ಮಾಡಲಾಗುವುದು’ ಎಂದು ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಗಂಗಾ– ಕಾವೇರಿ ಜೋಡಣೆ ಅಟಲ್‌ ಬಿಹಾರಿ ವಾಜಪೇಯಿ ಅವರ ಕನಸಾಗಿತ್ತು. ಅವರ ಚಿತಾಭಸ್ಮವನ್ನು ಈಗಾಗಲೇ ಗಂಗಾನದಿಯಲ್ಲಿ ವಿಸರ್ಜನೆ ಮಾಡಲಾಗಿದೆ’ ಎಂದು ಹೇಳಿದರು.

ADVERTISEMENT

ಮುಖಂಡರಾದ ಎಚ್‌.ಆರ್‌.ಅರವಿಂದ್‌. ಮಹಾಂತಪ್ಪ, ಸಿದ್ದರಾಜುಗೌಡ, ಅಶೋಕ್‌ ಕುಮಾರ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.