ADVERTISEMENT

ಚೆಕ್‌ಡ್ಯಾಂ ಮರುನಿರ್ಮಾಣದಿಂದ ಅನುಕೂಲ: ಶಾಸಕ ಕದಲೂರು ಉದಯ್

ಸ್ಟಾರ್ ಚಂದ್ರು, ಅಧಿಕೃತ ಘೋಷಣೆಯೊಂದೇ ಬಾಕಿ : ಶಾಸಕ ಕದಲೂರು ಉದಯ್

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2024, 14:32 IST
Last Updated 2 ಮಾರ್ಚ್ 2024, 14:32 IST
<div class="paragraphs"><p>ಮದ್ದೂರು ತಾಲ್ಲೂಕಿನ ನವಿಲೆ ಗ್ರಾಮದ ಬಳಿ ಹರಿಯುವ ಶಿಂಷಾ ನದಿಗೆ ಅಡ್ಡಲಾಗಿ ಸುಮಾರು ₹8.28 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಚೆಕ್ ಡ್ಯಾಮ್ ಪುನರ್ ನಿರ್ಮಾಣ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆಯನ್ನು ಶಾಸಕ ಕದಲೂರು ಉದಯ್ ನೆರವೇರಿಸಿದರು.</p></div>

ಮದ್ದೂರು ತಾಲ್ಲೂಕಿನ ನವಿಲೆ ಗ್ರಾಮದ ಬಳಿ ಹರಿಯುವ ಶಿಂಷಾ ನದಿಗೆ ಅಡ್ಡಲಾಗಿ ಸುಮಾರು ₹8.28 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಚೆಕ್ ಡ್ಯಾಮ್ ಪುನರ್ ನಿರ್ಮಾಣ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆಯನ್ನು ಶಾಸಕ ಕದಲೂರು ಉದಯ್ ನೆರವೇರಿಸಿದರು.

   

ಮದ್ದೂರು: ‘ಶಿಂಷಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಚೆಕ್ ಡ್ಯಾಂನ ಮರು ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು ಇದರಿಂದಾಗಿ ಈ ಭಾಗದ ಹಲವಾರು ಗ್ರಾಮಗಳ ರೈತರಿಗೆ ಅನುಕೂಲವಾಗಲಿದೆ’ ಎಂದು ಶಾಸಕ ಕದಲೂರು ಉದಯ್‌ ತಿಳಿಸಿದರು.

ತಾಲ್ಲೂಕಿನ ನವಿಲೆ ಗ್ರಾಮದ ಬಳಿ ಹರಿಯುವ ಶಿಂಷಾ ನದಿಗೆ ಅಡ್ಡಲಾಗಿ ಸುಮಾರು ₹8.28 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಚೆಕ್ ಡ್ಯಾಮ್ ಪುನರ್ ನಿರ್ಮಾಣ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.

ADVERTISEMENT

‘ಚೆಕ್‌ಡ್ಯಾಂ ಶಿಥಿಲಗೊಂಡು ಬೇಸಿಗೆಯಲ್ಲಿ ನೀರು ನಿಲ್ಲದೆ ರೈತರಿಗೆ ತೊಂದರೆಯಾಗುತ್ತಿರುವುದರ ಬಗ್ಗೆ ಜನರು ಮನವಿ ಮಾಡುತ್ತಿದ್ದರು. ಹೀಗಾಗಿ ಮರು ನಿರ್ಮಾಣ ಮಾಡಲಾಗುತ್ತಿದೆ’ ಎಂದರು.

ಒಮ್ಮತದ ಅಭ್ಯರ್ಥಿ: ‘ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಥಾರ್ ಚಂದ್ರು ಅವರೇ ನಮ್ಮೆಲ್ಲರ ಒಮ್ಮತದ ಅಭ್ಯರ್ಥಿಯಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ’ ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.

‘ಸ್ಟಾರ್ ಚಂದ್ರು ಅವರು ಮೂಲತಃ ನಮ್ಮ ಜಿಲ್ಲೆಯವರೇ ಆಗಿದ್ದು, ಅವರ ಸಹೋದರರು ಈಗಾಗಲೇ ಜನಪ್ರತಿನಿಧಿಗಳಾಗಿ ಜನಪ್ರಿಯ ಕೆಲಸಗಳನ್ನು ಮಾಡುತ್ತಿದ್ದಾರೆ. ಉದ್ಯಮಿಯಾಗಿರುವ ಚಂದ್ರು ಅವರು ಸರಳ, ಸಜ್ಜನಿಕೆಯ ಹಾಗೂ ಉತ್ತಮ ವ್ಯಕ್ತಿತ್ವ ಹೊಂದಿದ್ದಾರೆ’ ಎಂದರು.

ಸಂಭವನೀಯ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಸ್ಟಾರ್ ಚಂದ್ರು ಮಾತನಾಡಿ, ‘ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಆಶೀರ್ವದಿಸಿ ನಿಮ್ಮ ಸೇವೆ ಮಾಡಲು ಅನುವು ಮಾಡಿಕೊಡಬೇಕು’ ಎಂದು ಮನವಿ ಮಾಡಿದರು

ಈ ವೇಳೆ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಮುಖಂಡರಾದ ಕದಲೂರು ಮಹೇಶ್, ಗ್ರಾ. ಪಂ ಅಧ್ಯಕ್ಷ ತಿಮ್ಮೆಗೌಡ, ನರೇಂದ್ರ,ಶಿವು, ಶಂಕರಲಿಂಗೇಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.