ADVERTISEMENT

ಮದ್ದೂರು | ಡೆಂಗಿ ನಿಯಂತ್ರಣಕ್ಕೆ ತನ್ನಿ: ಶಾಸಕ ಕದಲೂರು ಉದಯ್

ಶಾಸಕ ಕದಲೂರು ಉದಯ್

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 14:47 IST
Last Updated 22 ಜುಲೈ 2024, 14:47 IST
ಡೆಂಗಿ ನಿಯಂತ್ರಣ ಕುರಿತು ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಸೋಮವಾರ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ಶಾಸಕ ಕದಲೂರು ಉದಯ್ ಅಧ್ಯಕ್ಷತೆಯಲ್ಲಿ ನಡೆಯಿತು. ತಹಶೀಲ್ದಾರ್ ಸೋಮಶೇಖರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮೋಹನ್ ಇತರರು ಇದ್ದರು
ಡೆಂಗಿ ನಿಯಂತ್ರಣ ಕುರಿತು ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಸೋಮವಾರ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ಶಾಸಕ ಕದಲೂರು ಉದಯ್ ಅಧ್ಯಕ್ಷತೆಯಲ್ಲಿ ನಡೆಯಿತು. ತಹಶೀಲ್ದಾರ್ ಸೋಮಶೇಖರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮೋಹನ್ ಇತರರು ಇದ್ದರು   

ಮದ್ದೂರು: ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಡೆಂಗಿ ನಿಯಂತ್ರಣಕ್ಕೆ ಪರಿಣಾಮಕಾರಿಯಾದ ಮುನ್ನೆಚ್ಚೆರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರೆಯಲಾಗಿದ್ದ ಅರೋಗ್ಯ ಇಲಾಖೆ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

‘ತಾಲ್ಲೂಕಿನಲ್ಲಿ ಡೆಂಗಿ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಆದರೆ ಈ ಬಗ್ಗೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡು ಪ್ರಕರಣಗಳು ಹೆಚ್ಚಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ADVERTISEMENT

‘ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ 3 ಡಯಾಲಿಸಿಸ್ ಯಂತ್ರಗಳಿದ್ದು, ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. ಕೆಲವರು ಮಂಡ್ಯಕ್ಕೆ ಹೋಗಿ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾದ ಸ್ಥಿತಿ ಬಂದಿದೆ. ಈ ಹಿನ್ನೆಲೆಯಲ್ಲಿ 5 ಯಂತ್ರಗಳನ್ನು ಅಳವಡಿಸಲು ಅಗತ್ಯ ಕ್ರಮ ಕೈಗೊಂಡು ರೋಗಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಉದಯ್ ಇದೇ ವೇಳೆ ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವೀಂದ್ರ ಬಿ.ಗೌಡ ಮಾತನಾಡಿ, ‘ಜನವರಿಯಿಂದ ಇಲ್ಲಿಯವರೆಗೆ ತಾಲೂಕಿನಲ್ಲಿ ಒಟ್ಟು 77 ಡೆಂಗಿ ಪ್ರಕರಣಗಳು ಕಂಡು ಬಂದಿದ್ದು, ಇದರಲ್ಲಿ 75 ಜನರು ಗುಣಮುಖರಾಗಿದ್ದಾರೆ. ಇಬ್ಬರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರಗೆ ಯಾವುದೇ ಸಾವು ಸಂಭವಿಸಿಲ್ಲ, ಡೆಂಗಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಎಲ್ಲಾ ರೀತಿಯ ಮುಂಜಾಗ್ರಾತಾ ಕ್ರಮ ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.