ಮಂಡ್ಯ:‘ನಾನು ಹುಟ್ಟಿ ಬೆಳೆದ ನನ್ನೂರಿಗೆ ಬರುವಂತಹದ್ದು ಮತ್ತು ಅಲ್ಲಿಯ ಅಭಿವೃದ್ಧಿ ಬಗ್ಗೆ ಯೋಚಿಸುವುದು ನನ್ನ ಕರ್ತವ್ಯ. ಅದಕ್ಕಾಗಿ ನಾನು ಇಲ್ಲಿಗೆ ಬಂದಿದ್ದೇನೆ’ ಎಂದು ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ತಮ್ಮ ಹುಟ್ಟೂರು ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆಗೆ ಭೇಟಿ ನೀಡಲು ಶನಿವಾರ ಆಗಮಿಸಿದ ಯಡಿಯೂರಪ್ಪ ಅವರು ಮಂಡ್ಯದ ತೂಬಿನಕೆರೆ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಿನ್ನೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕಇಂದು ನನ್ನ ಹುಟ್ಟೂರು ಬೂಕನಕೆರೆ ಮನೆಗೆ ಹೋಗುವೆ. ಅಲ್ಲಿಂದ ಗವಿ ಮಠದಲ್ಲಿ ಸಿದ್ದಲಿಂಗೇಶ್ವ ಸ್ವಾಮಿಗೆ ಪೂಜೆ ಸಲ್ಲಿಸುವೆ. ಅಲ್ಲಿಂದ ವಾಪಸ್ ಬಂದು, ಮೇಲುಕೋಟೆಗೆ ಹೋಗಿ ದೇವರ ದರ್ಶನ ಮಾಡುವೆ. ನಂತರ ಬೆಂಗಳೂರಿಗೆ ಹಿಂದಿರುಗುವೆ ಎಂದು ತಮ್ಮ ಇಂದಿನ ಕಾರ್ಯಕ್ರಮದ ಬಗ್ಗೆ ತಿಳಿಸಿದರು.
ಮನೆಯ ದೇವರು ಎಡೆಯೂರು ಸಿದ್ಧಲಿಂಗೇಶ್ವರ ಮತ್ತು ಇಲ್ಲಿಯ ಸಿದ್ಧಲಿಂಗೇಶ್ವರ ದೇವರಿಗೂ ಪೂಜೆ ಸಲ್ಲಿಸುತ್ತಾ ಬಂದಿದ್ದೇವೆ ಎಂದು ಹೇಳಿದರು.
ಸಂಪುಟ ರಚನೆ ಯಾವಾಗ ಆಗುತ್ತದೆ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಯಡಿಯೂರಪ್ಪ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಬಸವರಾಜ ಬೊಮ್ಮಾಯಿ ಇತರರು ಇದ್ದರು.
* ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.